ಬಿಜೆಪಿಯ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ... - ಬಿಜೆಪಿಯ ಮೋರ್ಚಾಗಳ ನೂತನ ಪದಾಧಿಕಾರಿಗಳ ಆಯ್ಕೆ
ಇಂದು ವಿವಿಧ ಮೋರ್ಚಾಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.ರಾಜ್ಯ ಘಟಕದ ಸಹ ಘಟಕಗಳಾದ 7 ಮೋರ್ಚಾಗಳಿಗೂ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಕೋಶಾಧ್ಯಕ್ಷರು ಹಾಗು ಕಾರ್ಯಾಲಯ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಇಂದೇ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು:ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕವಾದ ಬೆನ್ನಲ್ಲೇ ವಿವಿಧ ಮೋರ್ಚಾಗಳಿಗೂ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಯುವ ಮೋರ್ಚಾ ಅಧ್ಯಕ್ಷರಾಗಿ ಡಾ. ಸಂದೀಪ್ ,ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಗೀತಾ ವಿವೇಕಾನಂದ, ರೈತ ಮೋರ್ಚಾ ಅಧ್ಯಕ್ಷರಾಗಿ ಈರಣ್ಣ ಕಡಾಡಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಅಶೋಕ್ ಗಸ್ತಿ,ಎಸ್.ಸಿ ಮೋರ್ಚಾ ಅಧ್ಯಕ್ಷರಾಗಿ ಆದಿನಾರಾಯಣಸ್ವಾಮಿ, ಎಸ್.ಟಿ ಮೋರ್ಚಾ ಅಧ್ಯಕ್ಷರಾಗಿ ತಿಪ್ಪರಾಜು ಹವಾಲ್ದಾರ್ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷರಾಗಿ ಮುಜ್ಹಾಮಿಲ್ ಬಾಬು ಅವರನ್ನು ನೇಮಕಮಾಡಿ ಜುಲೈ 31 ರಂದು ಆದೇಶ ಹೊರಡಿಸಲಾಗಿತ್ತು.
ಇಂದು ಈ ಎಲ್ಲಾ ಮೋರ್ಚಾಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ರಾಜ್ಯ ಘಟಕದ ಸಹ ಘಟಕಗಳಾದ 7 ಮೋರ್ಚಾಗಳಿಗೂ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಕೋಶಾಧ್ಯಕ್ಷರು ಹಾಗು ಕಾರ್ಯಾಲಯ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಇಂದು ಆದೇಶ ಹೊರಡಿಸಲಾಗಿದೆ.
ವಿಜಯೇಂದ್ರ ಸ್ಥಾನಕ್ಕೆ ಪೈಪೋಟಿ:
ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ನಂತರ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಹಾಗೂ ವಿಜಯೇಂದ್ರ ಅವರ ಆಪ್ತ ತಮ್ಮೇಶಗೌಡ ನಿರ್ವಹಿಸುತ್ತಿದ್ದ ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಾಕಷ್ಟು ಪೈಪೋಟಿ ನಡೆದು ಅಂತಿಮವಾಗಿ ಧಾರವಾಡದ ಡಾ.ಮಲ್ಲಿಕಾರ್ಜುನ ಬಾಳಿಕಾಯಿ ಹಾಗೂ ಉತ್ತರ ಕನ್ನಡದ ಅಜಿತ್ ಹೆಗಡೆ ಬೆಳ್ಳೇಕೇರಿ ನೇಮಕಗೊಂಡಿದ್ದಾರೆ.