ಬೆಂಗಳೂರು: ನೀವು ಮುಖ್ಯಮಂತ್ರಿಯಾಗಿದ್ದಾಗ ಪಿಎಫ್ಐ, ಎಸ್‌ಡಿಪಿಐ ಮೇಲಿನ 175 ಕೇಸುಗಳನ್ನು ಯಾವುದೇ ಷರತ್ತಿಲ್ಲದೆ ಹಿಂದಕ್ಕೆ ಪಡೆದಾಗ ಅವರು ಕರ್ನಾಟಕ ಕಾಂಗ್ರೆಸ್ ಟೀಂ ಆಗಿದ್ದರಾ? ಕಾಂಗ್ರೆಸ್ ಪಕ್ಷಕ್ಕೆ ಅಲ್ಪಸಂಖ್ಯಾತರ ಮತಗಳು ಬರುತ್ತಿಲ್ಲ ಎಂಬ ಭಯದಲ್ಲಿ ಏನೇನೋ ಮಾತನಾಡುತ್ತಿದ್ದೀರಿ ಅಷ್ಟೇ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟೀಕಿಸಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಇತ್ತೀಚೆಗೆ ಮುಖ್ಯಮಂತ್ರಿಯಾಗುವ ಕನಸು ವಿಪರೀತವಾಗಿ ಬೀಳುತ್ತಿದೆ. ಮುಖ್ಯಮಂತ್ರಿಯಾಗಿದ್ದುಕೊಂಡು ಸ್ವಕ್ಷೇತ್ರದಲ್ಲಿ ಸೋತಿದ್ದು ಹೇಗೆ? ಗೆಲ್ಲಲಾರದೆ ಮುಖ ಮುಚ್ಚಿಕೊಂಡು ಓಡಾಡುತ್ತಿರುವ ನೀವು ಜನರ ಮನಸ್ಸು ಗೆದ್ದಿದ್ದೇವೆ ಎಂದು ಹೇಳುವುದು ಹಾಸ್ಯಾಸ್ಪದ ಎಂದು ಬಿಜೆಪಿ ಸರಣಿ ಟ್ವೀಟ್ ಮಾಡಿದೆ.
ಜನರ ಮನಸ್ಸು ಗೆದ್ದವರು ಸಾಲು-ಸಾಲು ಚುನಾವಣೆಯಲ್ಲಿ ಸೋತಿದ್ದು ಹೇಗೆ? ಉಪಚುನಾವಣೆಯಲ್ಲಿ ಕೆಪಿಸಿಸಿ ಸಾಧನೆ ಶೂನ್ಯ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗ್ರಾಮೀಣ ಭಾಗದಲ್ಲೇ ನೆಲಕಚ್ಚಿ ಹೋಗಿದ್ದೀರಿ. ಮುಖ್ಯಮಂತ್ರಿಯಾಗಬೇಕೆನ್ನುವ ದುರಾಸೆಯಿಂದ ಸಿದ್ದರಾಮಯ್ಯ ಸುಳ್ಳಿನ ಮೊರೆ ಹೋಗುತ್ತಿದ್ದೀರಿ ಎಂದು ಆರೋಪಿಸಿದೆ.