ಬೆಂಗಳೂರು: ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಪತ್ರ ಬರೆದಿದ್ದು, ಸಿಎಎ ವಿರೋಧಿ ಪ್ರತಿಭಟನೆಗೆ ವಿದೇಶದಿಂದ 120 ಕೋಟಿ ಹಣ ಸಂದಾಯವಾದ ಬಗ್ಗೆ ತನಿಖೆಗೆ ಆದೇಶಿಸುವಂತೆ ಕೇಂದ್ರ ಗೃಹಸಚಿವರನ್ನು ಒತ್ತಾಯಿಸಿದ್ದಾರೆ.
ಸಿಎಎ ವಿರುದ್ಧದ ಹೋರಾಟಕ್ಕೆ ವಿದೇಶಿ ಹಣ ಬಳಕೆ ಬಗ್ಗೆ ತನಿಖೆ ನಡೆಸಿ: ರವಿಕುಮಾರ್ ಪತ್ರ! - bangalore news
ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಪತ್ರ ಬರೆದಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಪಿಎಫ್ಐ ಮತ್ತು ಎಸ್ಡಿಪಿಐ ಬ್ಯಾನ್ ಮಾಡುವ ಬಗ್ಗೆ ಮಾತುಕತೆ ಆಗುತ್ತಿದೆ. ದೇಶದಲ್ಲಿ ಸಿಮಿ ಸಂಘಟನೆಯನ್ನ ಬ್ಯಾನ್ ಮಾಡುತ್ತಿದ್ದಂತೆ, ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆ ಅಡಿ ಚಟುವಟಿಕೆ ಆರಂಭ ಆಯ್ತು, ಸಿಎಎ ವಿರೋಧಿ ಚಟುವಟಿಕೆಗಳನ್ನು ಮಾಡುವ ಮೂಲಕ ದೇಶ ವಿರೋಧಿ ಚಟುವಟಿಕೆಗಳನ್ನು ಪಿಎಫ್ಐ ಮಾಡುತ್ತಿದೆ. ನರೇಂದ್ರ ಮೋದಿ ಇಮೇಜ್ ಕಡಿಮೆ ಮಾಡಲು ಪಿಎಫ್ಐ ಹಿಂದೆಯೇ ಸಂಚು ಮಾಡಿತ್ತು.
ಪಿಎಫ್ಐ ಮತ್ತು ಎಸ್ಡಿಪಿಐನಿಂದ ಸಿಎಎ ವಿರೋಧಿಸಿ ಮಾಡಿದ ಪ್ರತಿಭಟನೆಗೆ ಮುಸ್ಲಿಂ ರಾಷ್ಟ್ರಗಳಿಂದ 120 ಕೋಟಿ ಹಣ ಸಂದಾಯ ಆಗಿದೆ. ಕಾಂಗ್ರೆಸ್ ನಾಯಕರಿಗೂ ಅದರಲ್ಲಿ ಹಣ ಸಂದಾಯ ಮಾಡಲಾಗಿದೆ. ಈ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದು ತನಿಖೆಗೆ ಒತ್ತಾಯಿಸುತ್ತೇನೆ ಎಂದರು. ಹಾಗೂ ಹಿಂದೂ ಕಾರ್ಯಕರ್ತರ ಹತ್ಯೆಯಲ್ಲಿ ಪಿಎಫ್ಐ ಕೈವಾಡ ಇರೋದು ಗೊತ್ತಾಗಿದೆ. ಪಿಎಫ್ಐ ಮತ್ತು ಎಸ್ಡಿಪಿಐ ಬ್ಯಾನ್ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ ಪತ್ರ ಬರೆಯುತ್ತಿದ್ದೇನೆ, ರಾಜ್ಯ ಸರ್ಕಾರ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಅಂತ ಒತ್ತಾಯಿಸುತ್ತಿದ್ದೇನೆ ಎಂದರು.