ಬೆಂಗಳೂರು:ಉಪ ಚುನಾವಣಾ ಪ್ರಚಾರ ಕಾರ್ಯದ ಹಿನ್ನೆಲೆ ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಏಪ್ರಿಲ್ 8 ರಿಂದ 11ರವರೆಗೆ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ನಾಳೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಪ್ರವಾಸ - ಏಪ್ರಿಲ್ 8ರಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಪ್ರವಾಸ,
ನಾಳೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಅರುಣ್ ಸಿಂಗ್ ಏ.9ರಂದು ಬೆಳಗಾವಿಯಲ್ಲಿ, 10ರಂದು ಮಸ್ಕಿಯಲ್ಲಿ ಹಾಗೂ 11ರಂದು ಬಸವಕಲ್ಯಾಣದಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಏಪ್ರಿಲ್ 8ರಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅರುಣ್ ಸಿಂಗ್ ಅಲ್ಲಿಂದ ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ರಾತ್ರಿ ಪುತ್ತೂರಿನ ಕುಂಜಾಡಿಯಲ್ಲಿ ಪೂರ್ವ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಅರುಣ್ ಸಿಂಗ್ ಏ.9ರಂದು ಬೆಳಗಾವಿಯಲ್ಲಿ, 10ರಂದು ಮಸ್ಕಿಯಲ್ಲಿ ಹಾಗೂ 11ರಂದು ಬಸವಕಲ್ಯಾಣದಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಮೂರೂ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಏಪ್ರಿಲ್ 11ರಂದು ಸಂಜೆ ಹೈದರಾಬಾದ್ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ.