ಬೆಂಗಳೂರು :ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸ ನಡೆಸಲು ಉದ್ದೇಶಿಸಿರುವ ಹಿನ್ನೆಲೆ ಕಟೀಲ್ ಭೇಟಿ ಕುತೂಹಲ ಮೂಡಿಸಿದೆ.
ಕಾವೇರಿ ನಿವಾಸದಲ್ಲಿ ಬಿಎಸ್ವೈ ಭೇಟಿ ಮಾಡಿದ ಕಟೀಲ್, ರಾಜ್ಯ ಪ್ರವಾಸ ಕುರಿತು ಚರ್ಚೆ ನಡೆಸಿದ್ದಾರೆ. ಅಧಿವೇಶನ ಬಳಿಕ ಯಡಿಯೂರಪ್ಪ ರಾಜ್ಯ ಪ್ರವಾಸ ಹೊರಡಲಿದ್ದಾರೆ. ಜೊತೆಗೆ ಪ್ರಸಕ್ತ ವಿದ್ಯಮಾನಗಳ ಬಗ್ಗೆಯೂ ಚರ್ಚಿಸಲಾಗಿದೆ. ಪಕ್ಷ ಸಂಘಟನೆ ಸಂಬಂಧ ಯಡಿಯೂರಪ್ಪ ಜೊತೆ ಕಟೀಲ್ ಸಮಾಲೋಚನೆ ನಡೆಸಿದ್ದಾರೆ.