ಬೆಂಗಳೂರು:ಭಾರತ ನೂರು ಕೋಟಿ ಜನರಿಗೆ ವ್ಯಾಕ್ಸಿನ್ ನೀಡಿದ ಹಿನ್ನೆಲೆ ರಾಜ್ಯ ಬಿಜೆಪಿಯಿಂದ ನಾಳೆ ಏಕಕಾಲದಲ್ಲಿ ರಾಜ್ಯಾದ್ಯಂತ ಸುದ್ದಿಗೋಷ್ಠಿ ನಡೆಯಲಿದೆ. ರಾಜ್ಯಾದ್ಯಂತ ಬಿಜೆಪಿ ನಾಯಕರು ಮಾಧ್ಯಮಗೋಷ್ಠಿ ನಡೆಸಲಿದ್ದು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರೆಸ್ಮೀಟ್ ಮಾಡಿ, ಲಸಿಕೆ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಮಾತನಾಡಲಿದ್ದಾರೆ.
ಜಿಲ್ಲಾ ಸಚಿವರು, ಸಂಸದರು, ವೈದ್ಯಕೀಯ ಪ್ರಕೋಷ್ಠದ ಸಂಚಾಲಕರು, ಜಿಲ್ಲಾ ಅಧ್ಯಕ್ಷರು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಪ್ರೆಸ್ ಮೀಟ್ ಆಯೋಜಿಸಲಿದ್ದಾರೆ. ಲಸಿಕೆ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ಸಾಧನೆ ಬಿಂಬಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ವೇಳೆ, ಲಸಿಕೆ ಸಂಬಂಧ ಪ್ರತಿಪಕ್ಷ ಕಾಂಗ್ರೆಸ್ ಮಾಡಿರುವ ಆರೋಪದ ಬಗ್ಗೆ ತಿರುಗೇಟು ನೀಡಲಿದ್ದಾರೆ.