ಬೆಂಗಳೂರು: ಮೇಟಿ ಪ್ರಕರಣದಲ್ಲಿ ಸಂತ್ರಸ್ತೆ ಪ್ರಕರಣ ದಾಖಲಿಸಿದರೂ ಎಫ್‌ಐಆರ್ ಕೂಡಾ ಮಾಡಿರಲಿಲ್ಲ, ವಿಚಾರಣೆ ಕೂಡಾ ನಡೆಸಿರಲಿಲ್ಲ. ಈಗ ಕೆಪಿಸಿಸಿ ಧ್ವನಿ ಎತ್ತುತ್ತಿರುವುದು ಸಂತ್ರಸ್ತೆಗಾಗಿ ಅಲ್ಲ, ಸಿದ್ದರಾಮಯ್ಯಗಾಗಿ. ಡಿ.ಕೆ. ಶಿವಕುಮಾರ್ ಸಿಲುಕಿಸಲು ಸಿದ್ದರಾಮಯ್ಯ ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ಕಾಲೆಳೆದಿದೆ.
ಸದನದಲ್ಲಿ ಸಿಡಿ ಪ್ರಕರಣ ಪ್ರಸ್ತಾಪಿಸುವಾಗ ಡಿ.ಕೆ. ಶಿವಕುಮಾರ್ ಹೆಸರು ಪ್ರಕರಣದಲ್ಲಿ ಪ್ರಸ್ತಾಪವಾಗಿರಲಿಲ್ಲ. ಹೀಗಾಗಿ ಸದನದಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ರೋಷಾವೇಶ ಪ್ರದರ್ಶಿಸಿದರು. ಈಗ ಷಡ್ಯಂತ್ರದಲ್ಲಿ ಡಿಕೆಶಿ ಹೆಸರು ಕೇಳಿ ಬರುತ್ತಿದೆ. ಡಿಕೆಶಿ ಮೌನವಾಗಿದ್ದಾರೆ. ಸಿದ್ದರಾಮಯ್ಯ ಮತ್ತೆ ಮತ್ತೆ ಕೆದಕುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.