ಕರ್ನಾಟಕ

karnataka

ETV Bharat / state

ಬೆಂಕಿ ಇಲ್ಲದೆ ಹೊಗೆಯಾಡಲ್ಲ, ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್ ಹಗೆ ಸಾಧಿಸುತ್ತಿದೆ: ಬಿಜೆಪಿ - ಕಾಂಗ್ರೆಸ್​ ವಿರುದ್ಧ ಬಿಜೆಪಿ ಆರೋಪ

ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್ ಹಗೆತನ ಸಾಧಿಸುತ್ತಿದೆ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಕಾಂಗ್ರೆಸ್​ ಪಕ್ಷದ ವಿರುದ್ಧ ಬಿಜೆಪಿ ಆರೋಪಿಸಿ ಟ್ವೀಟ್​ ಮಾಡಿದೆ.

bjp tweet against congress
ಬಿಜೆಪಿ ಟ್ವೀಟ್

By

Published : Mar 16, 2021, 3:10 PM IST

ಬೆಂಗಳೂರು:ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್ ಹಗೆತನ ಸಾಧಿಸುತ್ತಿದೆ ಎಂದು ಆರೋಪಿಸಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬಿಜೆಪಿ ಟ್ವೀಟ್ ಮಾಡಿದೆ.

ಬಿಜೆಪಿ ಟ್ವೀಟ್
ನನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಮಹಾನಾಯಕರೊಬ್ಬರು ಹೇಳಿದ್ದಾರೆ. ಈ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಬರುತ್ತಿದೆ ಗೊತ್ತಾಗುತ್ತಿಲ್ಲ ಎಂದು ಮಹಾನಾಯಕಿಯೊಬ್ಬರು ಹೇಳಿದ್ದಾರೆ... ಏನಿದೆಲ್ಲಾ!? ಬೆಂಕಿಯಿಲ್ಲದೆ ಹೊಗೆಯಾಡುವುದೇ? ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್‌ ಹಗೆತನ ಸಾಧಿಸುತ್ತಿದೆ ಎಂದು ಬಿಜೆಪಿ ಟೀಕಿಸಿದೆ. ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ. ಆ ಮಹಾನಾಯಕ ಕೂಡ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ. ರಾಹುಲ್‌ ಗಾಂಧಿ ಏಕೆ ಸುಕನ್ಯಾ ದೇವಿಯ ಪರವಾಗಿ ಒಮ್ಮೆಯೂ ಧ್ವನಿ ಎತ್ತಿಲ್ಲ? ಎಂದು ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ನಾಯಕರ ಕಾಲೆಳೆದಿದೆ.

ABOUT THE AUTHOR

...view details