ಕರ್ನಾಟಕ

karnataka

ETV Bharat / state

ಮುಳುಗುತ್ತಿರುವ ಹಡಗಿನಲ್ಲಿ ಅಸ್ತಿತ್ವಕ್ಕಾಗಿ ಹೊಡೆದಾಟ: ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ - ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್

ದಲಿತ ಶಾಸಕ ಅಖಂಡ ಅವರು ಎಷ್ಟು ನೆರವು ಬೇಡಿದರೂ ರಾಜ್ಯ ಕಾಂಗ್ರೆಸ್ ಪಕ್ಷ ಅವರ ನೆರವಿಗೆ ಧಾವಿಸಲಿಲ್ಲ. ಸಿಡಿ ಪ್ರಕರಣವನ್ನು ರಾಜಕೀಯ ಲಾಭಕ್ಕಾಗಿ ಕೆಪಿಸಿಸಿ ಸಂಪೂರ್ಣವಾಗಿ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

bjp-tweet-against-congress
ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್

By

Published : Apr 2, 2021, 2:02 AM IST

ಬೆಂಗಳೂರು:ಕಾಂಗ್ರೆಸ್ ವಿರುದ್ಧ ಗುರುವಾರವೂ ಕೂಡ ಬಿಜೆಪಿ ಟ್ವೀಟ್ ವಾರ್ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟೀಕಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೇ, ಸಂತ್ರಸ್ಥೆ ನೇರವಾಗಿ ನಿಮ್ಮ ಹೆಸರು ಹೇಳಿದ್ದಾರೆ. ಸಂತ್ರಸ್ಥೆಯ ಪೋಷಕರೂ ನಿಮ್ಮ ಮೇಲೆ ಬೊಟ್ಟು ಮಾಡಿದ್ದಾರೆ. ಈಗ ನಿಮ್ಮದೇ ಪಕ್ಷದ ಮುಖಂಡ ಲಖನ್‌ ಜಾರಕಿಹೊಳಿ ಅವರು ನಿಮ್ಮ ರಾಜಿನಾಮೆ ಕೇಳುತ್ತಿದ್ದಾರೆ. ನೀವು ಮಾಡಿರುವ ಷಡ್ಯಂತ್ರಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕೇ? ಎಂದು ಟ್ವೀಟ್ ಮೂಲಕ ಬಿಜೆಪಿ ಪ್ರಶ್ನಿಸಿದೆ.

ದಲಿತ ಶಾಸಕ ಅಖಂಡ ಅವರು ಎಷ್ಟು ನೆರವು ಬೇಡಿದರೂ ರಾಜ್ಯ ಕಾಂಗ್ರೆಸ್ ಪಕ್ಷ ಅವರ ನೆರವಿಗೆ ಧಾವಿಸಲಿಲ್ಲ. ಸಿಡಿ ಪ್ರಕರಣವನ್ನು ರಾಜಕೀಯ ಲಾಭಕ್ಕಾಗಿ ಕೆಪಿಸಿಸಿ ಸಂಪೂರ್ಣವಾಗಿ ಬಳಸಿಕೊಳ್ಳುತ್ತಿದೆ. ಹಣಕಾಸಿನ ನೆರವು, ಕಾನೂನು ಸಲಹೆ, ವಾಹನದ ವ್ಯವಸ್ಥೆ ಎಲ್ಲವೂ ಕೆಪಿಸಿಸಿ ಕಚೇರಿಯಿಂದಲೇ ಆಗುತ್ತಿರುವುದರ ಹಿಂದಿನ ಉದ್ದೇಶವೇನು? ಎಂದು ಕಾಂಗ್ರೆಸ್ ನಡೆಯನ್ನು ಬಿಜೆಪಿ ಪ್ರಶ್ನಿಸಿದೆ.

ಮುಳುಗುತ್ತಿರುವ ಕಾಂಗ್ರೆಸ್‌ ಎಂಬ ಹಡಗಿನಲ್ಲಿ ಅಸ್ತಿತ್ವಕ್ಕಾಗಿ ಹೊಡೆದಾಟವಾಗುತ್ತಿದೆ. ಜೆಡಿಎಸ್‌ ಪಕ್ಷದಿಂದ ಬಂದ ವಲಸೆ ನಾಯಕ ಸಿದ್ದರಾಮಯ್ಯ ಅವರು ನಾನೇ ಮುಖ್ಯಮಂತ್ರಿ ಎನ್ನುತ್ತಾರೆ. ಮೂಲ ನಾಯಕ ಡಿ.ಕೆ. ಶಿವಕುಮಾರ್ ಅವರು, ನಾನೇಕೆ ಮುಖ್ಯಮಂತ್ರಿ ಆಗಬಾರದು ಎಂದು ಆಕಾಂಕ್ಷೆ ವ್ಯಕ್ತಪಡಿಸುತ್ತಾರೆ ಎಂದು ಕಾಂಗ್ರೆಸ್​​ನ ಆಂತರಿಕ ಕಲಹದ ಕುರಿತು ಬಿಜೆಪಿ ಟೀಕಿಸಿದೆ.

ABOUT THE AUTHOR

...view details