ಬೆಂಗಳೂರು :ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಪದೇಪದೆ ಬಿಜೆಪಿಯನ್ನು ಟೀಕಿಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸೆಕ್ಷನ್ ಸಿದ್ದರಾಮಯ್ಯ ಎಂದು ಬಿಜೆಪಿ ವ್ಯಂಗ್ಯ ವಾಡಿದೆ.
ಸೆಕ್ಷನ್ ಸಿದ್ದರಾಮಯ್ಯ.. ಟ್ವೀಟ್ ಮೂಲಕ ಪ್ರತಿಪಕ್ಷ ನಾಯಕನ ಕಾಲೆಳೆದ ಬಿಜೆಪಿ - ಬೆಂಗಳೂರು ಲೇಟೆಸ್ಟ್ ಅಪ್ಡೇಟ್ ನ್ಯೂಸ್
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸೆಕ್ಷನ್ ಸಿದ್ದರಾಮಯ್ಯ ಎಂದು ಬಿಜೆಪಿ ಟೀಕಿಸಿದೆ.
ನಿಮ್ಮ ನೇತೃತ್ವದಲ್ಲಿ ಸತ್ಯ ಶೋಧನಾ ಸಮಿತಿ ರಚನೆಯಾದರೆ ಒಂದೇ ಕಲ್ಲಿನಲ್ಲಿ ಎರಡು ಹಣ್ಣು ಕೆಡವಲು ಸಾಧ್ಯವಿದೆ. ಒಂದು, ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುತ್ತದೆ. ಇನ್ನೊಂದು, ಡಿ ಕೆ ಶಿವಕುಮಾರ್ ನಡೆಸಿದ ಷಡ್ಯಂತ್ರ ಸಾಬೀತುಪಡಿಸಬಹುದು. ಒಬ್ಬ ಪ್ರತಿಸ್ಪರ್ಧಿಯನ್ನು ಕೆಡವಿದ ಸಾಧನೆ ನಿಮ್ಮದಾಗಲಿದೆ. ಏನಂತೀರಿ? ಎಂದು ಬಿಜೆಪಿ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿ ಸಿದ್ದರಾಮಯ್ಯ ಕಾಲೆಳೆದಿದೆ.
ಜೈಲು ಹಕ್ಕಿ ಖಳನಾಯಕ :ಒಬ್ಬ ಅಮಾಯಕ ಹೆಣ್ಣು ಮಗಳನ್ನು ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಬಳಸಿಕೊಂಡು ರಾಜ್ಯದ "ಮಹಾ ನಾಯಕ" ಆಗಲು ಹೊರಟ "ಜೈಲು ಹಕ್ಕಿ" ಇಂದು "ಖಳನಾಯಕ" ಆಗಿರುವುದು ಕಾಂಗ್ರೆಸ್ ಪಕ್ಷದ ನೈತಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದೆ.