ಕರ್ನಾಟಕ

karnataka

ETV Bharat / state

ವಚನಾನಂದ ಶ್ರೀಗಳ ಭೇಟಿಯಾದ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ - Panchamashali cast

ನಗರದ ಶ್ವಾಸ ಯೋಗ ಸಂಸ್ಥೆಗೆ ಭೇಟಿ ನೀಡಿದ ವಿಜಯೇಂದ್ರ ವಚನಾನಂದ ಶ್ರೀಗಳನ್ನು ಭೇಟಿ ಮಾಡಿದರು. ಕೆಲಕಾಲ ಮಾತುಕತೆ ನಡೆಸಿದರು. ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಪಂಚಮಸಾಲಿ ಶ್ರೀಗಳ ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ.

ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ
ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ

By

Published : Mar 17, 2021, 3:35 AM IST

ಬೆಂಗಳೂರು: ಪಂಚಮಸಾಲಿ ಹೋರಾಟ ಹಿಂಪಡೆದ ಬೆನ್ನಲ್ಲೇ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ನಗರದ ಶ್ವಾಸ ಯೋಗ ಸಂಸ್ಥೆಗೆ ಭೇಟಿ ನೀಡಿದ ವಿಜಯೇಂದ್ರ ವಚನಾನಂದ ಶ್ರೀಗಳನ್ನು ಭೇಟಿ ಮಾಡಿದರು. ಕೆಲಕಾಲ ಮಾತುಕತೆ ನಡೆಸಿದರು. ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಪಂಚಮಸಾಲಿ ಶ್ರೀಗಳ ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ.

ಮೂರು ಕ್ಷೇತ್ರಗಳಲ್ಲಿ ಪಂಚಮಸಾಲಿ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಇದೀಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ, ಪಂಚಮಸಾಲಿ ಸಮುದಾಯ‌ವನ್ನು ಪ್ರವರ್ಗ 2ಎ ಗೆ ಸೇರ್ಪಡೆ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಿದೆ. ಸದನದಲ್ಲಿಯೂ ಈ ಬಗ್ಗೆ ಸಿಎಂ ಭರವಸೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.

ABOUT THE AUTHOR

...view details