ಬೆಂಗಳೂರು: ಸದಾಶಿವನಗರದಲ್ಲಿರುವ ರಮೇಶ್ ಜಾರಕಿಹೊಳಿ ಮನೆಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರೆ, ಇತ್ತ ಬಿಜೆಪಿ ಕಾರ್ಯಕರ್ತರು ಡಿಕೆಶಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ನಡೆಯಿತು.
ಬಿಜೆಪಿ ಕಾರ್ಯಕರ್ತರಿಂದ ಡಿಕೆಶಿ ಮನೆಗೆ ಮುತ್ತಿಗೆ ಹಾಕಲು ಯತ್ನ! - ಡಿಕೆಶಿ ಮನೆ ಮುಂದೆ ಬಿಜೆಪಿ ಪ್ರತಿಭಟನೆ
ಡಿಕೆ ಶಿವಕುಮಾರ್ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ನಡೆದಿದೆ.
ಡಿಕೆ ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ರಮೇಶ್ ಜಾರಕಿಹೊಳಿ ಮನೆ ಮುಂದೆ ಪ್ರತಿಭಟನೆ ನಡೆಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದಾದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಸದಾಶಿವನಗರದಲ್ಲಿನ ಡಿಕೆ ಶಿವಕುಮಾರ್ ಮನೆ ಮುಂದೆ ಪ್ರತಿಭಟನೆ ನಡೆಸಿ, ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಡಿಕೆಶಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಯಾವುದೇ ಹೆಣ್ಣು ಮಕ್ಕಳ ತಂದೆ-ತಾಯಿ, ಮಕ್ಕಳ ಭವಿಷ್ಯ ಹಾಳು ಮಾಡುವ ಹೇಳಿಕೆ ಕೊಡಲ್ಲ. ರಮೇಶ್ ಜಾರಕಿಹೊಳಿ ದಲಿತ ನಾಯಕರು. ಅವರನ್ನು ತುಳಿಯಲು ಈ ರೀತಿ ಮಾಡಬೇಕಾ?. ಒಂದು ದಲಿತ ಹೆಣ್ಣು ಮಗಳನ್ನು ಬಳಸಿಕೊಂಡು ಮಾಡಬೇಕಾ? ಬೇರೆ ರೀತಿ ರಾಜಕಾರಣ ಮಾಡೋಕೆ ಆಗಲ್ವಾ?. ಯುವತಿ ಸ್ವತಂತ್ರವಾಗಿ ಮುಂದೆ ಬಂದಿದ್ದಾರಾ?. ಅವರು ಬರಲಿ ನಿಮ್ಮ ಮುಂದೆ ಹೇಳಿಕೆ ನೀಡಲಿ. ಅವರ ತಂದೆ ತಾಯಿ ಮುಂದೆ ಬಂದು ಮಾತಾಡಿದ್ದಾರೆ ಅಲ್ವಾ ಅದನ್ನು ಯುವತಿ ಸಮರ್ಥಿಸಲಿ ಎಂದು ಆಗ್ರಹಿಸಿದರು.ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡರು.