ಬೆಂಗಳೂರು:ಕೊರೊನಾ ಜೊತೆಗೆ ಬ್ಲಾಕ್ ಫಂಗಸ್ ಕಾಟ ಶುರುವಾಗಿದ್ದು, ಇದೀಗ ಬ್ಲಾಕ್ ಫಂಗಸ್ ರೋಗದ ಚಿಕಿತ್ಸೆಗೆ ಸರ್ಕಾರದ ಅಭಯ ನೀಡಿದೆ. ಕೋವಿಡ್ ನಂತರದ ಬ್ಲಾಕ್ ಫಂಗಸ್ ರೋಗಕ್ಕೆ ಚಿಕಿತ್ಸೆ ನೀಡಲು ರಾಜ್ಯದ ಪ್ರಮುಖ 6 ಆಸ್ಪತ್ರೆಗಳು ರೆಡಿಯಾಗಿವೆ. ಬ್ಲಾಕ್ ಫಂಗಸ್ ರೋಗಕ್ಕೆ ಚಿಕಿತ್ಸಾ ವಿಧಾನಕ್ಕಾಗಿ ಸಮಿತಿ ರಚನೆ ಮಾಡಲಾಗಿತ್ತು. ಡಾ.H.S.ಸತೀಶ್ ಅಧ್ಯಕ್ಷತೆಯಲ್ಲಿ ಚಿಕಿತ್ಸೆ ವಿಧಾನ ನಡೆದಿದೆ.
ಎಲ್ಲೆಲ್ಲಿ ಚಿಕಿತ್ಸೆ?
- ಬೆಂಗಳೂರು ಮೆಡಿಕಲ್ ಕಾಲೇಜು ಆಸ್ಪತ್ರೆ (BMCRI)
- ಮೈಸೂರು ಮೆಡಿಕಲ್ ಕಾಲೇಜು
- ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ
- ಗುಲ್ಬರ್ಗಾ ಮೆಡಿಕಲ್ ಕಾಲೇಜು
- ಶಿವಮೊಗ್ಗ ಮೆಡಿಕಲ್ ಕಾಲೇಜು
- ಮಂಗಳೂರಿನ ವೆನ್ಲಾಕ್ ಆಸ್ಪತ್ರೆ
ಇನ್ನು ಬ್ಲಾಕ್ ಫಂಗಸ್ ರೋಗಕ್ಕೆ ಚಿಕಿತ್ಸೆ ನಿರಾಕರಿಸುವಂತಿಲ್ಲ. ಇದನ್ನ ರಾಜ್ಯ ಆರೋಗ್ಯ ಇಲಾಖೆ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ. ಚಿಕಿತ್ಸಾ ಸಾಮರ್ಥ್ಯ ಹೊಂದಿದ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದ್ದು, ಕೆಪಿಎಂಇ ಕಾಯ್ದೆ ಸೆಕ್ಷನ್ 7ಬಿ ಅಡಿಯಲ್ಲಿಯೂ ಪರಿಗಣನೆ ಮಾಡಲಾಗಿದೆ.