ಕರ್ನಾಟಕ

karnataka

ETV Bharat / state

ಬೆಂಗಳೂರಿನಲ್ಲಿ ರಾಕೇಶ್ ಟಿಕಾಯತ್, ಯುಧವೀರ್ ಮೇಲೆ ಮಸಿ ಎರಚಿದ ಕಿಡಿಗೇಡಿಗಳು - ಬೆಂಗಳೂರಿನಲ್ಲಿ ರಾಕೇಶ್ ಟಿಕಾಯಿತ್

ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯುಧ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Black ink thrown at Bhartiya Kisan Union leader Rakesh Tikait in Bengaluru
ಬೆಂಗಳೂರಿನಲ್ಲಿ ರಾಕೇಶ್ ಟಿಕಾಯತ್, ಯುಧ್ವೀರ್ ಮೇಲೆ ಮಸಿ ಎರಚಿದ ಕೋಡಿಹಳ್ಳಿ ಬೆಂಬಲಿಗರು

By

Published : May 30, 2022, 2:11 PM IST

Updated : May 30, 2022, 3:39 PM IST

ಬೆಂಗಳೂರು:ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯುಧ್ವೀರ್ ಸಿಂಗ್ ಮೇಲೆ ಕಿಡಿಗೇಡಿಗಳು ಮಸಿ ಎರಚಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿದ್ದ ರೈತ ಚಳವಳಿ ಬಗ್ಗೆ ಆತ್ಮಾವಲೋಕನದ ಸ್ಪಷ್ಟೀಕರಣ ಸಭೆಯಲ್ಲೇ ಘಟನೆ ನಡೆದಿದೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿದ್ದ ರಾಕೇಶ್ ಟಿಕಾಯತ್ ಮತ್ತು ಯುಧವೀರ್, ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ರಾಜ್ಯದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಮಾಧ್ಯಮಗೋಷ್ಟಿಯಲ್ಲಿ ಕೆಲವರು ವಾಗ್ವಾದಕ್ಕಿಳಿದಿದ್ದು, ಕಪ್ಪು ಮಸಿ ಎರಚಿದ್ದಲ್ಲದೆ. ಕುರ್ಚಿಗಳನ್ನು ಮನಬಂದಂತೆ ಎಸೆದ ಘಟನೆಯೂ ನಡೆಯಿತು. ಈ ವೇಳೆ ಟಿಕಾಯತ್​ ಮೇಲೆ ಹಲ್ಲೆ ಮಾಡಲು ಮುಂದಾದವನಿಗೂ ಸಭೆಯಲ್ಲಿದ್ದವರು ಸಖತ್​ ಗೂಸಾ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ರಾಕೇಶ್ ಟಿಕಾಯತ್, ಯುಧ್ವೀರ್ ಮೇಲೆ ಮಸಿ

ಕೋಡಿಹಳ್ಳಿ ಚಂದ್ರಶೇಖರ್​ ವಿರುದ್ಧ ಕೇಳಿಬರುತ್ತಿರುವ ಆರೋಪ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಲು ರಾಷ್ಟ್ರೀಯ ನಾಯಕರು ಬಂದಿದ್ದರು. ಮಾಧ್ಯಮಗೋಷ್ಟಿ ನಡೆಯುವಾಗ ಏಕಾಏಕಿ 3 ಜನ ಧಾವಿಸಿ ಮಸಿ ಎರಚಿ ಹಲ್ಲೆಗೆ ಮುಂದಾದರು. ಅವರು ಯಾರೆಂಬ ಬಗ್ಗೆ ಮಾಹಿತಿ ಇಲ್ಲ, ಮಸಿ ಬಳಿಯುವ ವೇಳೆ ಅವರು ಏನನ್ನೂ ಮಾತನಾಡಿಲ್ಲ. ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ, ವಿಚಾರಣೆ ಬಳಿಕ ಮಾಹಿತಿ ತಿಳಿದುಬರಲಿದೆ ಎಂದು ಪ್ರತ್ಯಕ್ಷದರ್ಶಿ ರೈತ ಮುಖಂಡರೋರ್ವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ರಾಕೇಶ್ ಟಿಕಾಯತ್, ಯುಧವೀರ್ ಮೇಲೆ ಮಸಿ ಎರಚಿದ ಕಿಡಿಗೇಡಿಗಳು

ಘಟನೆ ಸಂಬಂಧ ಮೂವರನ್ನು ಹೈಗ್ರೌಂಡ್​​ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಬೆಂಗಳೂರು ವಿವಿಯಲ್ಲಿನ ಅನ್ಯಾಯ ಪ್ರಶ್ನಿಸಿ ಪ್ರತಿಭಟಿಸಿದವರ ವಿರುದ್ಧ ಕೇಸ್‌.. ವಿದ್ಯಾರ್ಥಿಗಳ ಮೇಲಿನ FIR ಹಿಂಪಡೆಯಲು ಒತ್ತಾಯ..

Last Updated : May 30, 2022, 3:39 PM IST

ABOUT THE AUTHOR

...view details