ಬೆಂಗಳೂರು: ನಗರದ ಮೌಂಟ್ ಕಾರ್ಮೆಲ್ ಕಾಲೇಜು ಮುಂಭಾಗದ ರಸ್ತೆಯಲ್ಲಿ ಕಾಣಿಸಿಕೊಂಡ ಭಾರಿ ಶಬ್ಧದ ಜೊತೆಗಿನ ಬೆಂಕಿ ಕೆಲ ಕಾಲ ಆತಂಕಕ್ಕೆ ಎಡೆಮಾಡಿಕೊಟ್ಟಿತ್ತು. ಪರಿಶೀಲನೆ ನಡೆಸಿದಾಗ ಶಾರ್ಟ್ ಸರ್ಕ್ಯೂಟ್ಆಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸ್ ಆಯುಕ್ತ ಕಮಲ್‌ಪಂತ್ ಸ್ಪಷ್ಪಪಡಿಸಿದ್ದಾರೆ.
ಅಮಿತ್ ಶಾ ಸಂಚರಿಸಿದ ರಸ್ತೆ ಬದಿಯಲ್ಲಿ ಶಾರ್ಟ್ ಸರ್ಕ್ಯೂಟ್: ಕೆಲಕಾಲ ಜನರಲ್ಲಿ ಆತಂಕ - ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರು ಕಮಲ್ ಪಂತ್
ಈ ಘಟನೆ ಕರೆಂಟ್ ಶಾರ್ಟ್ ಸರ್ಕ್ಯೂಟ್ ನಿಂದ ನಡೆದಿದೆ ಎನ್ನಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಭಾರಿ ಶಬ್ಧ ಕೇಳಿಬಂದಿದೆ.
ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಪ್ಯಾಲೇಸ್ ರಸ್ತೆಯಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮಕ್ಕೆ ಅಮಿತ್ ಶಾ ಆಗಮಿಸುತ್ತಿದ್ದರು. ಈ ಮಾರ್ಗದ ಮೌಂಟ್ ಕಾರ್ಮೆಲ್ ಕಾಲೇಜು ಬಳಿ ಈ ಅವಾಂತರ ನಡೆದಿದೆ. ಕೆಳಗೆ ಬಿದ್ದಿದ್ದ ಎಲೆಕ್ಟ್ರಿಕಲ್ ವೈರ್ ಮೇಲೆ ಕಾರು ಹಾದುಹೋದ ನಂತರ ಈ ದುರಂತ ಸಂಭವಿಸಿದೆ. ವೈರ್ನಲ್ಲಿ ಬೆಂಕಿ ಕಾಣಿಸಿಕೊಂಡು ಶಬ್ಧದ ಜೊತೆ ಭಾರಿ ಹೊಗೆ ಕಾಣಿಸಿಕೊಂಡಿದೆ.
ಘಟನೆಯಿಂದ ಸ್ಥಳೀಯರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತರು, ಶಾರ್ಟ್ ಸರ್ಕ್ಯೂಟ್ ನಿಂದ ಎಲೆಕ್ಟ್ರಿಕಲ್ ವೈರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊಗೆ ಬಂದಿದೆ. ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದು ಆತಂಕ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.