ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 67 ನಾಗಪುರದ ಶಾಸಕರ ಭವನದಲ್ಲಿ ನಡೆದ ರಕ್ತದಾನ ಶಿಬಿರಕ್ಕೆ ಸಚಿವ ಕೆ. ಗೋಪಾಲಯ್ಯ ಚಾಲನೆ ನೀಡಿದರು.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ರಕ್ತದಾನ ಶಿಬಿರ - Minister K Gopalya
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಹಲವರು ರಕ್ತದಾನ ಮಾಡಿ ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡರು.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ರಕ್ತದಾನ ಶಿಬಿರ
ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಗೋಪಾಲಯ್ಯ, ಸಮಾಜದಲ್ಲಿ ಹುಟ್ಟಿದ ಪ್ರತಿಯೊಬ್ಬರೂ ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸುವುದು ಪುಣ್ಯದ ಕೆಲಸ ಎಂದರು.
ಯುವಕರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತ ದಾನ ಮಾಡುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ರಕ್ತದಾನ ಅಭಿಯಾನಕ್ಕೆ ಕೈಜೋಡಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.