ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಗೋವಿಂದಪುರ ಠಾಣಾ ಪೊಲೀಸರ ನೋಟಿಸಿಗೆ ಪ್ರತಿಯಾಗಿ ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಮುಂದೆ ಹಾಜರಾದ ಅಂಜುಂ ಪರ್ವೇಜ್ ವಿಚಾರಣೆ ಎದುರಿಸಿದ್ದಾರೆ.
ವಿಚಾರಣೆ ಮುಗಿಸಿ ವಾಪಾಸಾಗುವಾಗ ಪ್ರತಿಕ್ರಿಯಿಸಿದ ಅಂಜುಂ ಪರ್ವೇಜ್, 'ಇಂದು ವಿಚಾರಣೆಗೆ ಬರಲು ಹೇಳಿದ್ದರಿಂದ ಹಾಜರಾಗಿದ್ದೇನೆ. ಘಟನೆಯ ಕುರಿತಂತೆ ಮತ್ತು ಭವಿಷ್ಯದಲ್ಲಿ ಇಂಥಹ ಘಟನೆಗಳನ್ನ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ವರದಿ ಕೇಳಿದ್ದೇವೆ. ವರದಿಗಳು ಬರಬೇಕಿದೆ. ನಮ್ಮಲ್ಲಿನ ಇಂಜಿನಿಯರ್ಗಳಿಗೆ ಸಹ ಸುರಕ್ಷತಾ ಕ್ರಮಗಳ ಬಗ್ಗೆ ತರಬೇತಿ ನೀಡುತ್ತಿದ್ದೇವೆ. ಕಾಂಟ್ರಾಕ್ಟ್ ಅಗ್ರಿಮೆಂಟ್ ನಂತೆ ನಿರ್ಮಾಣ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಲಿದ್ದೇವೆ. ಮುಂದಿನ ದಿನಗಳಲ್ಲಿ ಈ ರೀತಿಯಾಗಿ ಘಟನೆ ನಡೆಯದಂತೆ ನೋಡಿಕೊಳ್ತೀವಿ' ಎಂದಿದ್ದಾರೆ.
ಪ್ರಕರಣದ ಹಿನ್ನೆಲೆ: ಜನವರಿ 10ರಂದು ಬೆಳಿಗ್ಗೆ ಎಚ್ಆರ್ಬಿಆರ್ ಲೇಔಟಿನ ರಿಂಗ್ ರಸ್ತೆಯಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ತೇಜಸ್ವಿನಿ ಹಾಗೂ ಆಕೆಯ ಮೂರು ವರ್ಷದ ಗಂಡು ಮಗು ವಿಹಾನ್ ಸಾವನ್ನಪ್ಪಿದ್ದರು. ಬೈಕಿನಲ್ಲಿದ್ದ ತೇಜಸ್ವಿನಿ ಪತಿ ಲೋಹಿತ್ ಕುಮಾರ್ ಹಾಗೂ ಮತ್ತೊಂದು ಹೆಣ್ಣು ಮಗು ಗಂಭೀರ ಗಾಯಗಳೊಂದಿಗೆ ಪಾರಾಗಿದ್ದರು. ಬಳಿಕ ಲೋಹಿತ್ ನೀಡಿದ ದೂರಿನನ್ವಯ ಬಿಎಂಆರ್ಸಿಎಲ್ ಹಾಗೂ ಪಿಲ್ಲರ್ ನಿರ್ಮಾಣದ ಹೊಣೆಗಾರಿಕೆ ಹೊತ್ತಿದ್ದ ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿಯ ಎಂಟು ಜನ ಅಧಿಕಾರಿಗಳ ವಿರುದ್ಧ ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಸೇರಿದಂತೆ ಹದಿನೈದು ಅಧಿಕಾರಿಗಳಿಗೆ ಪೊಲೀಸರು ನೊಟೀಸ್ ನೀಡಿದ್ದರು.
ಘಟನೆಯ ಬಳಿಕ ಆದ ಬೆಳವಣಿಗೆಗಳು