ಬೆಂಗಳೂರು :ಶಾಲಾ-ಕಾಲೇಜುಗಳು ಆರಂಭವಾದ ಹಿನ್ನೆಲೆ ಈವರೆಗೆ ಪಾಸ್ಗಾಗಿ ಅರ್ಜಿ ಸಲ್ಲಿಸದ ವಿದ್ಯಾರ್ಥಿಗಳು ಫೆ.28ರೊಳಗೆ ಅರ್ಜಿ ಸಲ್ಲಿಸಿ ಪಾಸ್ ಪಡೆಯುವಂತೆ ಬಿಎಂಟಿಸಿ ಸಂಸ್ಥೆ ತಿಳಿಸಿದೆ.
ವಿದ್ಯಾರ್ಥಿಗಳು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ತೊಂದರೆಯಾಗಬಾರದೆಂಬ ಉದ್ದೇಶದಿಂದ, ಅವರ ಅನುಕೂಲಕ್ಕಾಗಿ 2019-20ನೇ ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸ್ ಅಥವಾ ಪ್ರಸ್ತುತ ಸಾಲಿನಲ್ಲಿ ಶಾಲಾ/ಕಾಲೇಜಿಗೆ ದಾಖಲಾಗಿರುವ ಶುಲ್ಕದ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ಸಂಸ್ಥೆಯ ಬಸ್ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿತ್ತು.