ಬೆಂಗಳೂರು:ನಗರದ ಸುಮ್ಮನಹಳ್ಳಿ ಬಳಿ ಇಂದು ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಿಎಂಟಿಸಿ ಬಸ್ನ ಬ್ರೇಕ್ ವಿಫಲಗೊಂಡ ಹಿನ್ನೆಲೆಯಲ್ಲಿ ಸರಣಿ ಅಪಘಾತ ನಡೆದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಂಟಿಸಿ ಎಂ.ಡಿ ಶಿಖಾ ಘಟನೆಯಿಂದ ಒಟ್ಟು10 ಕ್ಕೂ ಹೆಚ್ಚು ವಾಹನಗಳು ಜಖಂ ಆಗಿದ್ದು, 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಾಗಳಾಗಿವೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಸದ್ಯ ಅಪಘಾತದಿಂದ ಮೃತಪಟ್ಟವರಿಗೆ ಅಂತ್ಯಸಂಸ್ಕಾರದ ಖರ್ಚಿಗಾಗಿ 25ಸಾವಿರ ಪರಿಹಾರ ನೀಡಿದ್ದೀವಿ ಎಂದು ಬಿಎಂಟಿಸಿ ಎಂ.ಡಿ. ಶಿಖಾ ಅವರು ತಿಳಿಸಿದ್ದಾರೆ. ಗಾಯಾಳುಗಳಿಗೆ ಬಿಎಂಟಿಸಿಯಿಂದಲೇ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತನಿಖೆಯ ನಂತರ ಮೃತರ ಕುಟುಂಬಕ್ಕೆ ಪರಿಹಾರ ಕೊಡುವುದಾಗಿ ತಿಳಿಸಿದರು.
ಅಲ್ಲದೇ ಪ್ರಾಥಮಿಕ ವರದಿ ಮಾಡಿ ಸಂಬಂಧಪಟ್ಟ ಡಿಪೋ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಸೂಪರಿಂಡೆಂಟ್ ರನ್ನ ಸಸ್ಪೆಂಡ್ ಮಾಡಿದ್ದೀವಿ. ಬಸ್ಗಳನ್ನು ಪ್ರತಿನಿತ್ಯ ತಪಾಸಣೆ ಮಾಡ್ತೀವಿ, ಡ್ರೈವರ್ಗಳು ಬಸ್ ಫಾಲ್ಟ್ ಬಗ್ಗೆ ವರದಿ ನೀಡ್ತಾರೆ. ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳತ್ತೇವೆ ಎಂದು ತಿಳಿಸಿದರು.