ಬೆಂಗಳೂರು:ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುಮ್ಮನಹಳ್ಳಿಯಲ್ಲಿ ನಡೆದಿದೆ.
ಬೈಕ್ಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್: ಸವಾರ ಸ್ಥಳದಲ್ಲೇ ಸಾವು - ಬೈಕ್ಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್: ಬೈಕ್ ಸವಾರ ಸ್ಥಳದಲ್ಲೇ ಸಾವು
ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುಮ್ಮನಹಳ್ಳಿಯಲ್ಲಿ ನಡೆದಿದೆ.

ಬೈಕ್ಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್: ಬೈಕ್ ಸವಾರ ಸ್ಥಳದಲ್ಲೇ ಸಾವು
ಶಿವಕುಮಾರ್ ಮೃತ ಸವಾರ. ಅಪಘಾತ ಸಂಭವಿಸುತ್ತಿದ್ದಂತೆಯೇ ಬಿಎಂಟಿಸಿ ಚಾಲಕ ಕಾಲ್ಕಿತ್ತಿದ್ದಾನೆ. ಗೊರಗುಂಟೆಪಾಳ್ಯ ಹಾಗೂ ಬನಶಂಕರಿ ಮಾರ್ಗದ ಬಿಎಂಟಿಎಸ್ (KA-57 F 1557) ಇದಾಗಿದ್ದು, ಸುಮ್ಮನಹಳ್ಳಿ ಬಳಿ ಬರುತ್ತಿರುವಾಗ ಹೆಲ್ಮೆಟ್ ಧರಿಸದೆ ಬೈಕ್ನಲ್ಲಿ ತೆರಳುತ್ತಿದ್ದ ಶಿವಕುಮಾರ್ಗೆ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸದ್ಯ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿರುವ ಕಾಮಾಕ್ಷಿಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಪತ್ತೆಯಾದ ಚಾಲಕನ ಶೋಧಕಾರ್ಯಕ್ಕೆ ಮುಂದಾಗಿದ್ದಾರೆ.