ಕರ್ನಾಟಕ

karnataka

ETV Bharat / state

ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ: ಸಚಿವ ಸವದಿ - lakshman savadi reaction on bmtc ticket rate hike news

ಬಿಎಂಟಿಸಿ ಟಿಕೆಟ್ ದರ ಹೆಚ್ಚಾಗುತ್ತದೆ ಎಂಬ ವದಂತಿ ಹಿನ್ನೆಲೆ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಿಗೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

savadi
ಸಚಿವ ಸವದಿ

By

Published : Jun 8, 2021, 1:41 PM IST

Updated : Jun 8, 2021, 2:27 PM IST

ಬೆಂಗಳೂರು:ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಿಗೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಎಂಟಿಸಿ ಟಿಕೆಟ್ ದರ ಹೆಚ್ಚಾಗುತ್ತದೆ ಎಂಬ ಮಾತುಗಳು ಬರುತ್ತಿವೆ. ಬಿಎಂಟಿಸಿ, ಕೆಎಸ್ಆರ್​ಟಿಸಿ ಸೇರಿ ನಾಲ್ಕು ನಿಗಮಗಳಿವೆ. ಈಗಾಗಲೇ ಬಡವರು ಅದರಲ್ಲಿ ಓಡಾಡುತ್ತಿದ್ದಾರೆ. ಮೊದಲೇ ಕಷ್ಟ. ಅವರಿಗೆ ಮತ್ತೆ ಕಷ್ಟ ಕೊಡಲು ಹೋಗಲ್ಲ. ಹೀಗಾಗಿ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ. ಅಧಿಕಾರಿಗಳು ಪ್ರಸ್ತಾವನೆ ಕೊಟ್ಟಿದ್ದಾರೆ. ಮುಂದೆ ನೋಡೋಣ ಅಂತಾ ಇದ್ದೇವೆ ಎಂದರು.

ಸಾರಿಗೆ ಸಚಿವ ಲಕ್ಷ್ಮಣ್ ಸವದಿ

ಜೂನ್ 14ರ ನಂತರ ಲಾಕ್​​ಡೌನ್ ಸಡಿಲ ಮಾಡಿದರೆ ಹಂತ ಹಂತವಾಗಿ ಸಾರಿಗೆ ಸೇವೆ ಪ್ರಾರಂಭ ಮಾಡುತ್ತೇವೆ. ಪ್ರಯಾಣಿಕರ ಅಂತರ ಕಾಯ್ದುಕೊಂಡು, ಅವರಿಗೆ ಸ್ಯಾನಿಟೈಸರ್, ಮಾಸ್ಕ್ ಎಲ್ಲವನ್ನು ನೀಡುತ್ತೇವೆ. ಎರಡೂ ಡೋಸ್ ಆಗುವವರೆಗೂ ನಮ್ಮ ನೌಕರರಿಗೆ ಒತ್ತಡ ಹಾಕಲ್ಲ. ಎರಡನೇ ಡೋಸ್ ತೆಗೆದುಕೊಂಡವರಿಗೆ ರಕ್ಷಣೆ ಕೊಟ್ಟು, ಸಾರಿಗೆ ವ್ಯವಸ್ಥೆ ಪ್ರಾರಂಭ ಮಾಡುತ್ತೇವೆ ಎಂದರು.

Last Updated : Jun 8, 2021, 2:27 PM IST

ABOUT THE AUTHOR

...view details