ಬೆಂಗಳೂರು:2022-23ನೇ ಸಾಲಿನ ಅಂತಿಮ ಸೆಮಿಸ್ಟರ್ ಪದವಿ, ವೃತ್ತಿಪರ, ಸ್ನಾತಕೋತ್ತರ, ತಾಂತ್ರಿಕ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ವಿದ್ಯಾರ್ಥಿ ಬಸ್ ಪಾಸ್ ಮಾನ್ಯತೆ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿ ಬಿಎಂಟಿಸಿ ಆದೇಶಿಸಿದೆ. ಸೆಮಿಸ್ಟರ್ ಪದವಿ, ವೃತ್ತಿಪರ, ಸ್ನಾತಕೋತ್ತರ, ತಾಂತ್ರಿಕ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ತರಗತಿ ಮತ್ತು ಪರೀಕ್ಷೆಗಳು ಇನ್ನೂ ಮುಕ್ತಾಯವಾಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಬಸ್ ಪಾಸ್ ಅವಧಿ ವಿಸ್ತರಿಸುವಂತೆ ಕಾಲೇಜು ಮತ್ತು ವಿಶ್ವವಿದ್ಯಾಲಯಗಳು ಬಿಎಂಟಿಸಿಯನ್ನು ಮನವಿ ಮಾಡಿಕೊಂಡಿದ್ದವು. ಹೀಗಾಗಿ 2022-23ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸಿನ ಅವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿ, ಸಾಮಾನ್ಯ ಸೇವೆ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಸ್ಥೆ ಆದೇಶದಲ್ಲಿ ತಿಳಿಸಿದೆ.
ಮಹಿಳೆಯರ ಉಚಿತ ಬಸ್ ಪಾಸ್ಗೆ ಆಟೋ ಚಾಲಕರಿಂದ ಖಂಡನೆ: ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ ತಂದಿರುವುದು ಮಹಿಳೆಯರಿಗೆ ಪ್ರಯೋಜನವಾಗುತ್ತಿದ್ದರೆ, ಆಟೋ ಚಾಲಕರು ಖಾಸಗಿ ಬಸ್ನವರು ನಷ್ಟಕ್ಕೆ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಇದೇ ವಿಚಾರವಾಗಿ ಜೂನ್ ತಿಂಗಳಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆಯಿಂದ ಆಟೋ ಚಾಲಕರಿಗೆ ಕೆಲಸ ಇಲ್ಲದಂತಾಗುತ್ತಿದೆ. ಇದರಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಹೀಗಾಗಿ ನಗರ ವ್ಯಾಪ್ತಿಯಲ್ಲಿ ಉಚಿತ ಬಸ್ಗೆ ಅವಕಾಶ ನೀಡಬಾರದು ಎಂದು ಆಟೋ ಚಾಲಕರು ಪ್ರತಿಭಟನೆ ನಡೆಸಿದ್ದರು.