ಬೆಂಗಳೂರು: ಡ್ರಗ್ಸ್ ದಂಧೆ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರ ತಂಡವೇ ಮುಂದುವರಿಸಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ, ಅಲ್ಲದೆ, ಇದಕ್ಕಾಗಿ ವಿಶೇಷ ತನಿಖಾ ತಂಡವನ್ನು ರಚಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸಿಸಿಬಿ ತಂಡವೇ ಡ್ರಗ್ಸ್ ಪ್ರಕರಣದ ತನಿಖೆ ಮುಂದುವರಿಸಲಿದೆ: ಬೊಮ್ಮಾಯಿ ಸ್ಪಷ್ಟನೆ - ಬೆಂಗಳೂರು ಡ್ರಗ್ಸ್ ದಂಧೆ ಪ್ರಕರಣ
ಡ್ರಗ್ಸ್ ದಂಧೆ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರ ತಂಡವೇ ಮುಂದುವರಿಸಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ
ಆರ್.ಟಿ. ನಗರದ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಸೂಚನೆ ನೀಡಲಾಗಿದೆ ಎಂದರು.
ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಹಲವು ದಾಳಿಗಳನ್ನು ನಡೆಸಿದ್ದು, ಕೆಲ ಆರೋಪಿಗಳನ್ನು ಬಂಧಿಸಿದ್ದಾರೆ. ಸಿಸಿಬಿ ಈಗಾಗಲೇ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ. ಸಿಸಿಬಿಯೇ ಒಂದು ವಿಶೇಷ ತಂಡ. ಪ್ರಕರಣದ ತನಿಖೆಯನ್ನು ಸಿಸಿಬಿಯೇ ಮುಂದುವರಿಸುತ್ತದೆ ಎಂದು ಹೇಳಿದರು.