ಕರ್ನಾಟಕ

karnataka

ETV Bharat / state

ಆಧುನಿಕ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಬೊಮ್ಮಾಯಿ ಸರ್ಕಾರ ಬೆಂಬಲ - ಆಧುನಿಕ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣ

ದೇಶಕ್ಕೆ ಆದಾಯ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. 2ನೇ ಮತ್ತು 3ನೇ ಸ್ತರದ ನಗರಗಳಲ್ಲಿ ವ್ಯಾಪಾರ ವೃದ್ಧಿಸುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ, ಗ್ಲೋಬಲ್ ಎಕ್ಸಿಬಿಷನ್ ಅಂಡ್ ಸರ್ವೀಸಸ್​ನ ಶ್ರೀಕಾಂತ್ ಭಾಗಿಯಾಗಿದ್ದರು..

Bommai
ಬೊಮ್ಮಾಯಿ

By

Published : Aug 27, 2021, 3:50 PM IST

ಬೆಂಗಳೂರು :ರಾಜ್ಯದಲ್ಲಿ ಅತ್ಯಾಧುನಿಕವಾಗಿ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣ ಮಾಡಿ ಹೆಚ್ಚು ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರದ ಬೆಂಬಲ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸೌತ್ ಜ್ಯುವೆಲ್ಲರಿ ಶೋ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿಯವರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಆಧುನಿಕ‌ ತಂತ್ರಜ್ಞಾನದಿಂದ ಆಭರಣ ಉತ್ಪಾದನೆಗೆ ಅನುಕೂಲವಾಗುವ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಜ್ಯುವೆಲ್ಲರಿ ಸಂಸ್ಥೆಗಳಿಗೆ ಸಲಹೆ ನೀಡಿದರು.‌

ಸೌತ್ ಜ್ಯುವೆಲ್ಲರಿ ಶೋ ಕಾರ್ಯಕ್ರಮ

ಭಾರತದ ಆಭರಣ ವ್ಯಾಪಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೈಪೋಟಿ ಮಾಡಬೇಕಾಗಿದೆ. ಗೋಲ್ಡ್ ಕಂಟ್ರೋಲ್ ಕಾಯ್ದೆ ತೆಗೆದು ಹಾಕಿದ ಬಳಿಕ ಮುಕ್ತ ವಾತಾವರಣ ನಿರ್ಮಾಣವಾಗಿದೆ. ಚಿನ್ನದ ವ್ಯಾಪಾರ ಉದ್ದಿಮೆಯಾಗಿ ಬೆಳೆದಿದೆ ಎಂದರು.

ಭಾರತೀಯ ಆರ್ಥಿಕತೆಯಲ್ಲಿ ಉಳಿತಾಯ ಸಂಸ್ಕೃತಿ ಇದೆ. ನಮ್ಮ ಜನರ ಉಳಿತಾಯ ಮನೋಭಾವ ಆಭರಣ ಉದ್ದಿಮೆಗೆ ಸಹಕಾರಿಯಾಗಿದೆ. ಬ್ಯಾಂಕ್ ದಿವಾಳಿಯಾದರೂ ಚಿನ್ನ ನಮ್ಮ ಆಪತ್ಬಾಂಧವ. ಒಡವೆ ಅಂದರೆ ಒಂದು ಆತ್ಮೀಯತೆ.

ಆಭರಣದ ವಹಿವಾಟು ಅಂತಃಕರಣವುಳ್ಳ ವ್ಯಾಪಾರ, ಇದು ಬಹಳ ಪುರಾತನ ವೃತ್ತಿ. ಭಾವನಾತ್ಮಕ ಸಂಬಂಧ ಬೆಸೆಯುವುದು. ಆಭರಣ ಮಾಡುವ ಕಲೆ ಸೂಕ್ಷ್ಮವಾದುದು. ಆಭರಣ ತಯಾರಿ ಕರ್ನಾಟಕದ ಪಾರಂಪರಿಕ ಕಲೆ. ಇದನ್ನು ಉಳಿಸಿ, ಬೆಳೆಸಬೇಕು ಎಂದರು.

ದೇಶಕ್ಕೆ ಆದಾಯ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. 2ನೇ ಮತ್ತು 3ನೇ ಸ್ತರದ ನಗರಗಳಲ್ಲಿ ವ್ಯಾಪಾರ ವೃದ್ಧಿಸುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ, ಗ್ಲೋಬಲ್ ಎಕ್ಸಿಬಿಷನ್ ಅಂಡ್ ಸರ್ವೀಸಸ್​ನ ಶ್ರೀಕಾಂತ್ ಭಾಗಿಯಾಗಿದ್ದರು.

ಓದಿ: ಮೈಸೂರು ಬಳಿಕ ಬೆಳಗಾವಿಯಲ್ಲೂ ಹೇಯ ಕೃತ್ಯ: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್..!

ABOUT THE AUTHOR

...view details