ಬೆಂಗಳೂರು: ದೈವಜ್ಞ ಬ್ರಾಹ್ಮಣ ಸಮಾಜ ಹಾಗೂ ಇತರೆ ಸಮುದಾಯದವರು ತಮ್ಮ ಪಾರಂಪರಿಕ ಕಸುಬನ್ನು ಉಳಿಸಿ ಬೆಳೆಸಲು ಸರ್ಕಾರ ಎಲ್ಲಾ ರೀತಿಯ ನೆರವು ನೀಡಲು ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪಾರಂಪರಿಕ ಕಸುಬುದಾರರಿಗೆ ನೆರವು ನೀಡಲು ಸರ್ಕಾರ ಸಿದ್ಧ: ಸಿಎಂ ಬೊಮ್ಮಾಯಿ - bommai laying of foundation Community House of Daivajna Brahmana Sangha
ಬದಲಾಗುತ್ತಿರುವ ಆರ್ಥಿಕ ವ್ಯವಸ್ಥೆಯಲ್ಲಿ ಕುಲ ಕಸುಬುಗಳನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿರುವ ವಿವಿಧ ಸಮುದಾಯಗಳ ಪ್ರಯತ್ನ ಹೆಮ್ಮೆ ಪಡುವ ವಿಷಯ. ಹಾಗಾಗಿ ತಮ್ಮ ಪಾರಂಪರಿಕ ಕಸುಬನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿರುವ ಸಮುದಾಯಗಳಿಗೆ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲು ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಸಂಘದ ಸಮುದಾಯ ಭವನ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ವರ್ಚುವಲ್ ಮೂಲಕ ಸಿಎಂ ಬೊಮ್ಮಾಯಿ ಚಾಲನೆ ನೀಡಿ ಮಾತನಾಡಿದರು. ಬದಲಾಗುತ್ತಿರುವ ಆರ್ಥಿಕ ವ್ಯವಸ್ಥೆಯಲ್ಲಿ ಕುಲ ಕಸುಬುಗಳನ್ನು ಉಳಿಸಿ, ಬೆಳೆಸಿಕೊಂಡು ಬರುತ್ತಿರುವ ವಿವಿಧ ಸಮುದಾಯಗಳ ಪ್ರಯತ್ನ ಹೆಮ್ಮೆ ಪಡುವ ವಿಷಯ. ಅತ್ಯಂತ ಕೌಶಲ್ಯಪೂರ್ಣ ಕಾಯಕವನ್ನು ಮಾಡುತ್ತಿದ್ದೀರಿ. ಬದಲಾಗುತ್ತಿರುವ ಆರ್ಥಿಕ ವ್ಯವಸ್ಥೆಯಲ್ಲಿ ವ್ಯಾಪಾರೀಕರಣ, ಜಾಗತೀಕರಣ ಹಾಗೂ ತಂತ್ರಜ್ಞಾನ ಸ್ಪರ್ಧೆಯಿಂದಾಗಿ ಹಲವರು ಕಸುಬು ಬಿಡುವ ಪರಿಸ್ಥಿತಿ ಬಂದಿದೆ. ಬದಲಾಗುತ್ತಿರುವ ಪರಿಸ್ಥಿತಿಗೆ ನಾವು ಹೊಂದಿಕೊಂಡಾಗ ಮಾತ್ರ ಕಸುಬನ್ನು ಮುಂದುವರೆಸಲು ಸಾಧ್ಯ ಎಂದು ತಿಳಿಸಿದರು.
ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಸಂಘದ ಅಧ್ಯಕ್ಷ ರಾಮರಾವ್ ವಿ. ರಾಯ್ಕರ್ ಮತ್ತು ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.