ಬೆಂಗಳೂರು :ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ಪ್ಯಾಕೇಜ್ ಟೂರ್ ಗೆ ಬುಕ್ಕಿಂಗ್ ಪ್ರಾರಂಭವಾಗಿದೆ. ಈ ಯೋಜನೆಯ ಮೊದಲ ರೈಲು ನವೆಂಬರ್ 11 ರಂದು ಬೆಂಗಳೂರಿನಿಂದ ಹೊರಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುವ ನಿಟ್ಟಿನಲ್ಲಿ ಯೋಜಿಸಲಾಗುತ್ತಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದಿವ್ಯ ಕಾಶಿ - ಭವ್ಯಕಾಶಿಯ ಅಡಿಯಲ್ಲಿ ರಾಜ್ಯದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಶಿಗೆ ಭೇಟಿ ನೀಡಿ ವಿಶ್ವನಾಥನ ದರ್ಶನ ಪಡೆಯಲಿ ಎನ್ನುವ ಉದ್ದೇಶದಿಂದ ಈ ವಿಶೇಷ ಪ್ಯಾಕೇಜ್ ಟೂರನ್ನು ಆಯೋಜಿಸಲಾಗಿದೆ. ಕೇಂದ್ರ ಸರ್ಕಾರದ ಭಾರತ್ ಗೌರವ್ ಯೋಜನೆಯ ಅಡಿಯಲ್ಲಿ ರೈಲನ್ನು ಮುಜರಾಯಿ ಇಲಾಖೆ ಗುತ್ತಿಗೆಗೆ ಪಡೆದು ಈ ಯೋಜನೆ ಕಾರ್ಯತಗೊಳಿಸುತ್ತಿದ್ದಾರೆ. ಕೇಂದ್ರ ರೈಲ್ವೇ ಸಚಿವರ ಸಂಪೂರ್ಣ ಸಹಕಾರದೊಂದಿಗೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಯಾತ್ರೆಯ ಮೊದಲ ರೈಲು ನವೆಂಬರ್ 11 ರಂದು ಬೆಂಗಳೂರಿನಿಂದ ಹೊರಡಲಿದೆ ಎಂದು ಹೇಳಿದ್ದಾರೆ.
ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ರೈಲು ಯೋಜನೆ: ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ರೈಲು ಯೋಜನೆಯ ಬುಕ್ಕಿಂಗ್ ಈಗಾಗಲೇ ಪ್ರಾರಂಭವಾಗಿದೆ. ಐಆರ್‌ಸಿಟಿಸಿ ಹಾಗೂ ಐಟಿಎಂಎಸ್ ವೆಬ್‌ಸೈಟ್ ಗಳ ಮೂಲಕ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದ್ದು, ಈಗಾಗಲೇ ಹಲವಾರು ಜನರು ಬುಕ್ಕಿಂಗ್ ಮಾಡಿಕೊಳ್ಳುತ್ತಿದ್ದಾರೆ. ಈ ಲಿಂಕ್ ಗಳ ಮೂಲಕ ಬುಕ್ಕಿಂಗ್ ಮಾಡಬಹುದಾಗಿದೆ.
https://www.irctctourism.com/pacakage_description?packageCode=SZKBG01