ಕರ್ನಾಟಕ

karnataka

ETV Bharat / state

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಭರ್ಜರಿ ಆಫರ್..​ ನವೆಂಬರ್​ನಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ - 67th Kannada Rajyotsava

ನವೆಂಬರ್ 1 ರಿಂದ 30ರ ವರೆಗೆ ಪ್ರತಿದಿನ ಬೆಳಗ್ಗೆ 9 ಗಂಟೆಯಿಂದ ಸಂಜೆ 7ರ ವರೆಗೆ ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿ ಆವರಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆ ಆರಂಭಿಸಲಾಗುತ್ತಿದ್ದು, ಆಕರ್ಷಕ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮಾಡಲಾಗುವುದು.

kannada sahitya parishad
ಕನ್ನಡ ಸಾಹಿತ್ಯ ಪರಿಷತ್ತು

By

Published : Oct 29, 2022, 2:53 PM IST

ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿಶೇಷ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದೆ. ನವೆಂಬರ್ ಮಾಸದಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಮಾರಾಟ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವೆಂಬರ್ 1 ರಿಂದ 30ರ ವರೆಗೆ ಪ್ರತಿದಿನ ಬೆಳಗ್ಗೆ 9 ಗಂಟೆಯಿಂದ ಸಂಜೆ 7ರ ವರೆಗೆ ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿ ಆವರಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆ ಆರಂಭಿಸಲಾಗುತ್ತಿದೆ. ಶೇ.10 ರಿಂದ ಶೇ.75 ರಷ್ಟು ರಿಯಾಯಿತಿ ದರದಲ್ಲಿ ಅಮೂಲ್ಯವಾದ ಪುಸ್ತಕಗಳ ಮಾರಾಟದ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ತೀರಾ ಅಪರೂಪವೆನಿಸಿದ ಪುಸ್ತಕಗಳ ಪ್ರಕಟಣೆ:ಕನ್ನಡ ಸಾಹಿತ್ಯ ಇತಿಹಾಸದಲ್ಲಿ ತೀರಾ ಅಪರೂಪವೆನಿಸಿದ ಪುಸ್ತಕಗಳ ಪ್ರಕಟಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತ ಬಂದಿದ್ದು, ಪರಿಷತ್ತು ಪ್ರಕಟಿಸಿರುವ ಎಲ್ಲಾ ಪುಸ್ತಕಗಳು ಮಾರಾಟಕ್ಕೆ ಲಭ್ಯವಾಗಿವೆ. ಕನ್ನಡ ರತ್ನಕೋಶ ಮತ್ತು ಸಂಕ್ಷಿಪ್ತ ಕನ್ನಡ ನಿಘಂಟು, ಸಂಕ್ಷಿಪ್ತ ಕನ್ನಡ ಇಂಗ್ಲಿಷ್ ನಿಘಂಟು, ಬೃಹತ್ ಕನ್ನಡ-ಕನ್ನಡ ನಿಘಂಟು, ಪರೀಕ್ಷೆ ಪುಸ್ತಕಗಳು, ಗದ್ಯಾನುವಾದ, ಶತಮಾನೋತ್ಸವ ಮಾಲಿಕೆ ಪುಸ್ತಕಗಳು, ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆ ಎಲ್ಲ ಸಂಪುಟಗಳು, ಮಹಿಳಾ ಸಾಹಿತ್ಯ ಸಂಪುಟಗಳು, ದಲಿತ ಸಾಹಿತ್ಯ ಸಂಪುಟಗಳು, ಜೀವನ ಚರಿತ್ರೆಗಳು, ಪಿ.ಹೆಚ್.ಡಿ ಪುಸ್ತಕಗಳು, ಜಿಲ್ಲಾ ಸಾಹಿತ್ಯ ಸಮ್ಮೇಳನದ ಪುಸ್ತಕಗಳು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣಿಕೆ ಸಂಚಿಕೆಗಳು ಹಾಗೂ ಇತರೆ ಪ್ರಕಟಣೆಗಳು ಮಾರಾಟಕ್ಕೆ ಲಭ್ಯವಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಕನ್ನಡ ಸಾಹಿತ್ಯ ಪರಿಷತ್ತಿನಿಂದ ರಾಜ್ಯೋತ್ಸವ ಪ್ರಯುಕ್ತ ರಿಯಾಯಿತಿ ಮಾರಾಟ

ABOUT THE AUTHOR

...view details