ಬೆಂಗಳೂರು: ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರದ ಕುರಿತು ಚರ್ಚೆ ನಡೆಸಿದರು.
ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ಬೆಂಗಳೂರಿನ ಬ್ರಿಟಿಷ್ ಡೆಪ್ಯೂಟಿ ಹೈ ಕಮಿಷನರ್ ಜೆರೆಮಿ ಪಿಲ್ಮೋರ್ ಬೆಡ್ ಫೋರ್ಡ್ ಅವರು, ಸಚಿವರಾದ ಆರ್. ಅಶೋಕ್, ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಮುಖ್ಯಮಂತ್ರಿಯವರ ಕಾರ್ಯದರ್ಶಿ ವಿ. ಪೊನ್ನುರಾಜ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಸಮ್ಮುಖದಲ್ಲಿ ಸಿಎಂ ಜೊತೆ ಮಾತುಕತೆ ನಡೆಸಿದರು.