ಬೆಂಗಳೂರು: ಕೆ.ಆರ್ಪುರಂ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ ಪರ ಇಂದು ಬಿಎಸ್ವೈ ಬೃಹತ್ ಸಮಾವೇಶದಲ್ಲಿ ಮತಯಾಚಿಸಲಿದ್ದಾರೆ.
ಕೆ.ಆರ್.ಪುರಂನಲ್ಲಿ ಬಿಎಸ್ವೈ ಪ್ರಚಾರ ಇಂದು... 10 ಸಾವಿರ ಮಂದಿಗೆ ಆಸನ ವ್ಯವಸ್ಥೆ - ಕೆ.ಆರ್.ಪುರಂ. ಉಪಚುನಾವಣೆ ಪ್ರಚಾರದಲ್ಲಿ ಸಿಎಂ
ಬೆಂಗಳೂರಿನ ಕೆ.ಆರ್.ಪುರಂ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ ಪರ ಮತಯಾಚನೆಗೆ ಸಿಎಂ ಬಿಎಸ್ವೈ ಇಂದು ಆಗಮಿಸಲಿದ್ದಾರೆ. ಅನೇಕ ರಾಜಕೀಯ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ.
ಕೆ.ಆರ್.ಪುರಂನಲ್ಲಿ ಬಿಎಸ್ವೈ ಪ್ರಚಾರ ಇಂದು
ಮಧ್ಯಾಹ್ನ 3 ಗಂಟೆಗೆ ಐಟಿಐ ಕ್ರೀಡಾಂಗಣದಲ್ಲಿ ಏರ್ಪಡಿಸಿರುವ ಸಾರ್ವಜನಿಕ ಸಮಾವೇಶಕ್ಕೆ ಸಿಎಂ ಯಡಿಯೂರಪ್ಪ ಆಗಮಿಸಲಿದ್ದಾರೆ. ಜೊತೆಗೆ ಕ್ಷೇತ್ರದ ಬಿಜೆಪಿ ಉಸ್ತುವಾರಿಯಾಗಿರುವ ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ಹಲವು ಸಚಿವರು ಪಾಲ್ಗೊಳ್ಳಲಿದ್ದಾರೆ.
ಈಗಾಗಲೇ ಐಟಿಐ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶ ಸಿದ್ಧತೆ ಪೂರ್ಣಗೊಂಡಿದ್ದು, 10 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ. ಸುಮಾರು 25-30 ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ಹಾಗೂ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಕಂದಾಯ ಸಚಿವ ಆರ್.ಅಶೋಕ್ ಸಮಾವೇಶದ ಸಿದ್ಧರೆ ಪರಿಶೀಲಿಸಿದ್ದಾರೆ.