ಬೆಂಗಳೂರು:74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
2019ರ ಜು. 26ರಂದು ರಾಜ್ಯದ 19ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಯಡಿಯೂರಪ್ಪನವರಿಗೆ ಇದು ಎರಡನೇ ಸ್ವಾತಂತ್ರ್ಯೋತ್ಸವ ಆಚರಣೆಯಾಗಿದೆ. ಆದರೆ ತಮ್ಮ ಅಧಿಕೃತ ಸರ್ಕಾರಿ ನಿವಾಸದಲ್ಲಿ ಮೊದಲನೇಯದಾಗಿದೆ. ಪ್ರತಿಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ತಾವು ಸಿಎಂ ಆದ ಸಂದರ್ಭದಿಂದ ಸುದೀರ್ಘ ಏಳು ವರ್ಷ ಕಾವೇರಿ ನಿವಾಸದಲ್ಲಿಯೇ ವಾಸವಾಗಿದ್ದರು.