ಕರ್ನಾಟಕ

karnataka

ETV Bharat / state

ಸಿಎಂ ಹೊಣೆಗೇಡಿತನದಿಂದ ಮಾತನಾಡುವುದು ಸರಿಯಲ್ಲ: ಬಿಎಸ್​ವೈ - undefined

ಮತ್ತೆ ಸಿಎಂ ಮೇಲೆ ಮಾಜಿ ಸಿಎಂ ಬಿಎಸ್​ವೈ ಟ್ವೀಟಾಸ್ತ್ರ ಪ್ರಯೋಗಿಸಿದ್ದಾರೆ. ಜಿಂದಾಲ್ ಕಂಪನಿಗೆ ತಾವೇ ಜಮೀನು ನೀಡಿ ಈಗ ಏನೂ ಗೊತ್ತಿಲ್ಲದ ರೀತಿ ವರ್ತಿಸುತ್ತಿದ್ದಾರೆಂದು ಮುಖ್ಯಮಂತ್ರಿ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ.

ಬಿ.ಎಸ್‌ ಯಡಿಯೂರಪ್ಪ ಟ್ವೀಟ್

By

Published : Jun 18, 2019, 1:15 PM IST

ಬೆಂಗಳೂರು:ಚೆಕ್ ಮೂಲಕ ಹಣ ಪಡೆದು ಜಿಂದಾಲ್ ಕಂಪನಿಗೆ ಜಮೀನು ನೀಡಿ ಈಗ ಅವರೇ ಧರಣಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಟಾಂಗ್​ ನೀಡಿದ್ದಾರೆ.

ಬಿ.ಎಸ್‌ ಯಡಿಯೂರಪ್ಪ ಟ್ವೀಟ್

ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡು ಹೊಣೆಗೇಡಿತನದಿಂದ ಮಾತನಾಡುವುದು ಸರಿಯಲ್ಲ. ಸಿಬಿಐ ನ್ಯಾಯಾಲಯ ನನ್ನನ್ನು ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಿದೆ. ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುವಂತೆ ಹಗುರವಾಗಿ ಮಾತಾಡಬೇಡಿ ಎಂದು ಕಿಡಿಕಾರಿದ್ದಾರೆ.

ಆಡಳಿತದಲ್ಲಿ ಸಂಪೂರ್ಣ ವಿಫಲರಾಗಿ ದಿಕ್ಕೆಟ್ಟಿರುವ ನೀವು ನಿಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ವ್ಯರ್ಥ ಪ್ರಯತ್ನ ಮಾಡಬೇಡಿ ಎಂದು ಟ್ವೀಟ್ ಮೂಲಕ ಸಿಎಂಗೆ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

For All Latest Updates

TAGGED:

ABOUT THE AUTHOR

...view details