ಕರ್ನಾಟಕ

karnataka

ETV Bharat / state

ಭ್ರಷ್ಟಾಚಾರ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಎಸ್​ವೈ

ಭ್ರಷ್ಟಾಚಾರ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಎಸ್​ವೈ. ಸೋಮವಾರ ಸುಪ್ರೀಂ ಕೋರ್ಟ್​ನಲ್ಲಿ ಯಡಿಯೂರಪ್ಪ ಅರ್ಜಿ ವಿಚಾರಣೆಗೆ.

ಸುಪ್ರೀಂ ಮೆಟ್ಟಿಲೇರಿದ ಬಿಎಸ್​ವೈ
ಸುಪ್ರೀಂ ಮೆಟ್ಟಿಲೇರಿದ ಬಿಎಸ್​ವೈ

By

Published : Sep 18, 2022, 5:17 PM IST

Updated : Sep 19, 2022, 11:11 AM IST

ಬೆಂಗಳೂರು:ಭ್ರಷ್ಟಾಚಾರ ಪ್ರಕರಣದಲ್ಲಿ ಎಫ್​ಐಆರ್​ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ್​ ನೀಡಿದ ಸೂಚನೆ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಮತ್ತು ನ್ಯಾ. ಹಿಮಾ ಕೊಹ್ಲಿ ಅವರ ಪೀಠ ಸೋಮವಾರ ಪ್ರಕರಣದ ವಿಚಾರಣೆ ನಡೆಸಲಿದೆ.

ಪ್ರಕರಣದ ಹಿನ್ನೆಲೆ: ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಆದರೆ, ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಟಿ.ಜೆ. ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.

ದೂರನ್ನು ಮರುಪರಿಶೀಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿತ್ತು. ಬಳಿಕ ತನಿಖೆ ನಡೆಸಿ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ತನಿಖೆಗೆ ಮುಂದಾಗಿರುವ ಲೋಕಾಯುಕ್ತ ಪೊಲೀಸರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ಬಿ.ವೈ ವಿಜಯೇಂದ್ರ ಹಾಗೂ ಮತ್ತಿತರರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ನಮ್ಮ ಪರವಾದ ವಕೀಲರು ಸುಪ್ರೀಂಕೋರ್ಟ್​ನಲ್ಲಿ ವಾದ ಮಂಡಿಸುವುದಕ್ಕಾಗಿ ಸಿದ್ಧರಾಗುತ್ತಿದ್ದಾರೆ ಎಂದು ಟಿ.ಜೆ. ಅಬ್ರಾಹಂ 'ಈಟಿವಿ ಭಾರತ'ಕ್ಕೆ ವಿವರಿಸಿದರು.

(ಇದನ್ನೂ ಓದಿ: ಯಡಿಯೂರಪ್ಪ, ಪುತ್ರ ವಿಜಯೇಂದ್ರ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್)

Last Updated : Sep 19, 2022, 11:11 AM IST

ABOUT THE AUTHOR

...view details