ಬೆಂಗಳೂರು:ರಾಜ್ಯ ರಾಜಕೀಯ ಚಟುವಟಿಕೆಯಲ್ಲಿ ಬದಲಾವಣೆಗಳಾಗುತ್ತಿದ್ದು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಮೆರಿಕದಿಂದ ಬರಲಿ. ಅಮೆರಿಕ ಏನು ದೂರ ಇದೆಯಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಿಎಂ ಕುಮಾರಸ್ವಾಮಿ ಅವರ ಕಾಲೆಳೆದಿದ್ದಾರೆ.
ಅಮೆರಿಕ ಏನು ದೂರ ಇದೆಯಾ? ಸಿಎಂ ವಾಪಸ್ ಬರಲಿ: ಬಿಎಸ್ವೈ..! - news kannada
ರಾಜ್ಯ ರಾಜಕೀಯದಲ್ಲಿ ನಿನ್ನೆ ನಡೆದ ಘಟನೆಯಿಂದ ಮೈತ್ರಿ ಪಕ್ಷದ ನಾಯಕರಲ್ಲಿ ನಡುಕ ಶುರುವಾಗಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಬಗ್ಗೆ ಏನು ಹೇಳಿದ್ದಾರೆ ಗೊತ್ತಾ?
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾತನಾಡಿದ ಅವರು, ಕಳೆದ ಮೂರು ತಿಂಗಳಿನಿಂದ ರಿವರ್ಸ್ ಆಪರೇಷನ್ ಮಾಡುವುದಾಗಿ ಹೇಳುತ್ತಿದ್ದಾರೆ. ಆದರೆ, ನಮ್ಮವರು ಯಾರೂ ಹೋಗೊಲ್ಲ. ನಾವು ಎಲ್ಲೂ ಆಪರೇಷನ್ ಮಾಡುತ್ತೇವೆ ಎಂದು ಹೇಳಿಲ್ಲ. ರಿವರ್ಸ್ ಆಪರೇಷನ್ ಮಾಡೋದಾದ್ರೆ ಮಾಡಲಿ ಎಂದರು.
ಈ ಅಧಿವೇಶನದಲ್ಲಿ ವಿಶ್ವಾಸ ಮತಯಾಚನೆ ಮಾಡುವ ಪ್ರಶ್ನೆಯೇ ಇಲ್ಲ. ಈ ಬೆಳವಣಿಗೆ ನೋಡಿ ಸದನದಲ್ಲಿ ಏನು ಮಾಡಬೇಕು ಎಂದು ಶಾಸಕಾಂಗ ಪಕ್ಷದ ಸಭೆ ಕರೆದು ಚರ್ಚಿಸಿ ನಂತರ ತೀರ್ಮಾನ ಮಾಡುತ್ತೇವೆ ಎಂದರು.