ಬೆಂಗಳೂರು: ಬಿಜೆಪಿ ಸರ್ಕಾರ ರಚನೆಯಾಗಿ ಇಂದಿಗೆ ಎರಡು ವರ್ಷ ಪೂರೈಸಿದ ಸಂಭ್ರಮದ ದಿನವೇ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ್ದಾರೆ. ಸಂಪುಟ ಸಹೋದ್ಯೋಗಿಗಳ ಜೊತೆ ರಾಜಭವನಕ್ಕೆ ಆಗಮಿಸಿ ಪದತ್ಯಾಗ ಮಾಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸರ್ಕಾರದ ಸಾಧನಾ ಕಾರ್ಯಕ್ರಮದ ನಂತರ ನೇರವಾಗಿ ರಾಜಭವನಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಮಾಧುಸ್ವಾಮಿ, ಬಿ.ಸಿ.ಪಾಟೀಲ್ ಆಗಮಿಸಿ, ಯಡಿಯೂರಪ್ಪಗಾಗಿ ಕಾದು ಕುಳಿತರು.