ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ನಾಯಕರು ತಲೆ ಕೆಟ್ಟು ಸುದೀಪ್ ವಿಚಾರದಲ್ಲಿ ಏನೇನೋ ಮಾತನಾಡುತ್ತಿದ್ದಾರೆ: ಬಿಎಸ್​ವೈ - ಬಿಜೆಪಿಯ ಟಿಕೆಟ್ ಘೋಷಣೆ

ಬಿಜೆಪಿಯ ಕೆಲ ನಾಯಕರ ಪರ ನಟ ಕಿಚ್ಚ ಸುದೀಪ್​ ಪ್ರಚಾರ ಮಾಡುತ್ತಿರುವ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಸುದೀಪ್ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

yediyurappa
ಮಾಜಿ ಸಿಎಂ ಯಡಿಯೂರಪ್ಪ

By

Published : Apr 6, 2023, 12:10 PM IST

Updated : Apr 6, 2023, 2:22 PM IST

ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ನಟ ಸುದೀಪ್ ಬಿಜೆಪಿಗೆ ಬೆಂಬಲ ನೀಡುವ ನಿರ್ಧಾರ ಪ್ರಕಟಿಸಿರುವುನ್ನು ನಾನು ಸ್ವಾಗತಿಸಿದ್ದೇನೆ. ಸುದೀಪ್ ವಿಚಾರದಲ್ಲಿ ಕಾಂಗ್ರೆಸ್​ನವರು ತಲೆ ಕೆಟ್ಟು ಟೀಕೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದರು.

ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದೀಪ್ ಪ್ರಚಾರ ವಿಚಾರಕ್ಕೆ ಕಾಂಗ್ರೆಸ್ ಲೇವಡಿ ಮಾಡಿದೆ. ಕಾಂಗ್ರೆಸ್​ನವರಿಗೆ ತಲೆಕೆಟ್ಟು ಏನೇನೋ ಮಾತನಾಡುತ್ತಿದ್ದಾರೆ. ಚಲನಚಿತ್ರದಲ್ಲಿ ಫೇಮಸ್ ಆಗಿರುವಂತಹ ವ್ಯಕ್ತಿ ಬಿಜೆಪಿಗೆ ಸಪೋರ್ಟ್ ಮಾಡುತ್ತೇನೆ ಅಂತ ಹೇಳಿದ್ದಾರೆ, ಇದನ್ನು ಸ್ವಾಗತ ಮಾಡುತ್ತೇವೆ. ಬಿಜೆಪಿಯವರಿಗೆ ಬೆಂಬಲ ಸಿಗುತ್ತಿರುವುದನ್ನು ಕಾಂಗ್ರೆಸ್​ನವರಿಗೆ ಸಹಿಸೋಕೆ ಆಗುತ್ತಿಲ್ಲ. ಹಾಗಾಗಿ, ಈ ರೀತಿ ಟೀಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ :ನಟ ಕಿಚ್ಚ ಸುದೀಪ್‌ ಚಿತ್ರ, ಟಿವಿ ಶೋ ಪ್ರಸಾರ ನಿಲ್ಲಿಸಿ: ಚುನಾವಣಾ ಆಯೋಗಕ್ಕೆ ಪತ್ರ ಬರೆದ ವಕೀಲ ಶ್ರೀಪಾಲ್

ಸಚಿವ ವಿ.ಸೋಮಣ್ಣ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಬಿಎಸ್​ವೈ, ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ನಡೆಯುತ್ತದೆ. ಯಾರು ಎಲ್ಲಿ ಸ್ಪರ್ಧೆ ಮಾಡಬೇಕು ಎಂದು ವರಿಷ್ಠ ಮಂಡಳಿ ನಿರ್ಧಾರ ಮಾಡಲಿದೆ ಎಂದರು.

ಇದನ್ನೂ ಓದಿ :ಸಿಎಂ ಬೊಮ್ಮಾಯಿ ಪರ ನಾನು ನಿಲ್ಲುತ್ತೇನೆ, ಆದರೆ ಪಕ್ಷ ಸೇರಲ್ಲ: ಸುದೀಪ್ ಸ್ಪಷ್ಟನೆ

ಬಿಜೆಪಿಯ ಟಿಕೆಟ್ ಘೋಷಣೆ ಯಾವಾಗ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ನಾಳೆ ಪಟ್ಟಿಯನ್ನು ಹೈಕಮಾಂಡ್​ಗೆ ಕಳುಹಿಸಿಕೊಡಲಾಗುತ್ತದೆ. ಏಪ್ರಿಲ್ 8 ರಂದು ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಚರ್ಚಿಸಿ ನಂತರ ಹೈಕಮಾಂಡ್ ಪಟ್ಟಿ ಬಿಡುಗಡೆ ಮಾಡಲಿದೆ ಎಂದರು‌.

ಇದನ್ನೂ ಓದಿ :'ಸುದೀಪ್​ಗೆ ಬೆದರಿಕೆ ವಿಚಾರದಲ್ಲಿ ಸರ್ಕಾರ ಸುಮ್ಮನೆ ಕೂರಲ್ಲ': ಡಾ. ಸುಧಾಕರ್

ನಟ ಸುದೀಪ್​ ಹೇಳಿದ್ದೇನು? : ನಿನ್ನೆ ಬೆಂಗಳೂರಿನ ಖಾಸಗಿ ತಾರಾ ಹೋಟೆಲ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಸುದೀಪ್​," ನಾನು ಬಿಜೆಪಿ ಸೇರುತ್ತಿಲ್ಲ, ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ನೀಡುತ್ತಿಲ್ಲ. ಕಷ್ಟದಲ್ಲಿ ನನ್ನ ಪರವಾಗಿ ನಿಂತಿದ್ದ ಬಸವರಾಜ ಬೊಮ್ಮಾಯಿ ಅವರ ಪರವಾಗಿ ನಿಲ್ಲುತ್ತಿದ್ದೇನೆ. ವೈಯಕ್ತಿಕವಾಗಿ ಮುಖ್ಯಮಂತ್ರಿಗಳ ಬೆಂಬಲಕ್ಕೆ ನಿಂತಿದ್ದೇನೆ. ಅವರು ಸೂಚಿಸುವವರ ಪರವಾಗಿ ಮಾತ್ರ ಪ್ರಚಾರ ನಡೆಸುತ್ತೇನೆ. ನಾನು ಇಂದು ಒಂದು ಪಕ್ಷದ ಪರ ಇಲ್ಲ. ಕೇವಲ ಬೊಮ್ಮಾಯಿ ಎನ್ನುವ ವ್ಯಕ್ತಿ ಪರ ಅಷ್ಟೇ. ಇದು ರಾಜಕೀಯಕ್ಕಲ್ಲ. ವೈಯಕ್ತಿಕವಾಗಿ ಅವರ ಬೆಂಬಲಕ್ಕೆ ಇದ್ದೇನೆ ಎಂದು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ :ಬಿಜೆಪಿಗೆ ನಟ ಸುದೀಪ್‌ ಬೆಂಬಲ: ಕೇಸರಿ ಪಕ್ಷದ ಲೆಕ್ಕಾಚಾರವೇನು?

ಇನ್ನು ಸುದೀಪ್ ತಾರಾ ಬಲ ಪಡೆದು ಬೊಮ್ಮಾಯಿ ಕ್ಷೇತ್ರದಲ್ಲಿ ಮತ ಬುಟ್ಟಿ ಗಟ್ಟಿಗೊಳಿಸಿಕೊಳ್ಳಲು ಯೋಜಿಸಿದ್ದಾರೆ. ಮುಖ್ಯಮಂತ್ರಿ ಜೊತೆ ಪ್ರಭಾವಿ ನಾಯಕರ ಕ್ಷೇತ್ರಗಳಿಗೂ ಸಹ ಸುದೀಪ್‌ ಅವರನ್ನು ಬಳಸಿಕೊಳ್ಳುವ ಚಿಂತನೆ ನಡೆದಿದೆ ಎನ್ನಲಾಗಿದೆ. ಶ್ರೀರಾಮುಲು, ರಾಜುಗೌಡ, ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ವಿವಿಧ ಸಮುದಾಯದ ಪ್ರಭಾವಿ ನಾಯಕರು ಕೂಡ ತಮ್ಮ ವರ್ಚಸ್ಸಿನ ಜೊತೆಗೆ ಸುದೀಪ್ ಹೆಸರು ಬಳಸಿ ಹೆಚ್ಚಿನ ಮತ ಪಡೆಯಲು ಪ್ರಯತ್ನ ನಡೆಸಲಿದ್ದಾರೆ ಎಂಬ ಮಾತು ಹರಿದಾಡುತ್ತಿವೆ.

Last Updated : Apr 6, 2023, 2:22 PM IST

ABOUT THE AUTHOR

...view details