ಬೆಂಗಳೂರು:ಕೊರೊನಾ ಪಾಸಿಟಿವ್ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪೂರ್ಣ ಗುಣಮುಖರಾಗಿದ್ದು, ಸದ್ಯದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.
ಸಿಎಂ ಬಿಎಸ್ವೈ ಗುಣಮುಖ: ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಾಧ್ಯತೆ - ಬಿ.ಎಸ್.ಯಡಿಯೂರಪ್ಪ ಗುಣಮುಖ
ಕೊರೊನಾ ಪಾಸಿಟಿವ್ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮತ್ತೊಮ್ಮೆ ಕೊರೊನಾ ಪರೀಕ್ಷೆ ನಡೆಸಿದ್ದು, ವರದಿ ನೆಗೆಟಿವ್ ಎಂದು ಬಂದಿದೆ.
ಆಗಸ್ಟ್ 2ರಂದು ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಕಳೆದ 8 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಅವರಿಗೆ ಮತ್ತೊಮ್ಮೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ವರದಿ ನೆಗೆಟಿವ್ ಎಂದು ಬಂದಿದೆ.
ರೋಗ ಲಕ್ಷಣ ರಹಿತ ಸೋಂಕಿಗೆ ತುತ್ತಾಗಿದ್ದ ಸಿಎಂ ಆಸ್ಪತ್ರೆಯಲ್ಲಿ ವೈದ್ಯಕೀಯ ನಿಗಾದಲ್ಲಿ ವಿಶ್ರಾಂತಿ ಪಡೆದಿದ್ದು, ಇದೀಗ ಸಂಪೂರ್ಣ ಗುಣಮುಖರಾಗಿರುವುದರಿಂದ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ನಾಳೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಮಣಿಪಾಲ್ ಆಸ್ಪತ್ರೆ ವೈದ್ಯರು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.