ಬೆಂಗಳೂರು:ಇಂದು ಸಂಜೆ ರಾಜಭವನದಲ್ಲಿ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಅವರ ಪ್ರಮಾಣವಚನ ಸ್ವೀಕಾರ ಹಿನ್ನೆಲೆಯಲ್ಲಿ, ರಾಜಭವನ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆಯಾಗಲಿದ್ದು, ಮುಂಜಾಗ್ರತ ಕ್ರಮವಾಗಿ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ: ಪರ್ಯಾಯ ಮಾರ್ಗ ಬಳಸುವಂತೆ ವಾಹನ ಸವಾರರಲ್ಲಿ ಮನವಿ - parking
ಇಂದು ಸಂಜೆ ಬಿಎಸ್ವೈ ಪ್ರಮಾಣ ಸ್ವೀಕಾರ ಮಾಡಲಿದ್ದು, ರಾಜಭವನದ ಸುತ್ತ ಮುತ್ತ ವಾಹನ ದಟ್ಟಣೆ ಹೆಚ್ಚಾಗಿ ಇರಲಿದೆ. ಹೀಗಾಗಿ ಪರ್ಯಾಯ ಮಾರ್ಗ ಬಳಸುವುದು ಸುಗಮ ಎಂದು ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ರಾಜಭವನ
ಸಂಜೆ 6ರಿಂದ 6.30 ವರೆಗೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ಬಿಜೆಪಿ ಶಾಸಕರು, ಮುಖಂಡರು ಹಾಗೂ ಗಣ್ಯರು ಆಗಮಿಸಲಿಸದ್ದಾರೆ. ಇದರಿಂದ ರಾಜಭವನದ ಹೊರಗೆ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಲಿದೆ ಎಂದು ತಿಳಿಸಿದರು.
ಸುಗಮ ಸಂಚಾರಕ್ಕಾಗಿ ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರು ಆದಷ್ಟು ಪರ್ಯಾಯ ಮಾರ್ಗ ಬಳಸುವಂತೆ ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ಮನವಿ ಮಾಡಿದ್ದಾರೆ.
TAGGED:
parking