ಕರ್ನಾಟಕ

karnataka

ETV Bharat / state

ಕಟೀಲ್​ ಜೊತೆ ಗುಲಗಂಜಿಯಷ್ಟೂ ಭಿನ್ನಾಭಿಪ್ರಾಯವಿಲ್ಲ: ಗಾಳಿ ಸುದ್ದಿಗೆ ತೆರೆ ಎಳೆದ ಬಿಎಸ್​ವೈ - ನೆರೆ ಪರಿಹಾರ

ಕೇಂದ್ರ ಸರ್ಕಾರ ಯಾವ ರಾಜ್ಯಕ್ಕೂ ನೆರೆ ಪರಿಹಾರ ನೀಡಿಲ್ಲ. ಪ್ರತಿಪಕ್ಷಗಳು ಸುಮ್ಮನೆ ಬೊಬ್ಬೆ ಹೊಡೆಯುವುದನ್ನು ನಿಲ್ಲಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಲ್ಲಿದ್ದರು ಹೀಗಾಗಿ ಸ್ವಲ್ಪ ತಡವಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಸಿಎಂ ಯಡಿಯೂರಪ್ಪ

By

Published : Oct 3, 2019, 12:28 PM IST

ಬೆಂಗಳೂರು: ನೆರೆ ವಿಚಾರವಾಗಿ ವಿರೋಧ ಪಕ್ಷಗಳು ಬೊಬ್ಬೆ ಹೊಡೆಯುವುದನ್ನು ನಿಲ್ಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಪ್ರತಿಪಕ್ಷಗಳ ನಾಯಕರನ್ನು ಕುಟುಕಿದ್ದಾರೆ.

ಸಿಎಂ ಯಡಿಯೂರಪ್ಪ

ಸಚಿವ ಸಂಪುಟ ಸಭೆಯ ಬಳಿಕ ಬೆಳಗಾವಿ ಭಾಗಕ್ಕೆ ಹೋಗಿ ಪರಿಶೀಲನೆ ನಡೆಸುತ್ತೇನೆ. ಅತಿವೃಷ್ಟಿ ಪರಿಸ್ಥಿತಿ ಬಗ್ಗೆ ಗಮನ ಹರಿಸುತ್ತೇವೆ. ರಸ್ತೆ, ಸೇತುವೆಗಳು ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿವೆ. ಇದಕ್ಕಾಗಿ ಕೇಂದ್ರದಿಂದ ದೊಡ್ಡ ಪ್ರಮಾಣದ ಅನುದಾನಬೇಕು. ಈ ಸಂಬಂಧ ಮತ್ತೊಂದು ಬಾರಿ ದೆಹಲಿಗೆ ಹೋಗಿ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಪರಿಹಾರ ಕೇಳುತ್ತೇನೆ ಎಂದು ತಿಳಿಸಿದರು.

ಕೇಂದ್ರದಿಂದ ಯಾವ ರಾಜ್ಯಕ್ಕೂ ಹಣ ಕೊಟ್ಟಿಲ್ಲ. ಹಾಗೆಂದು ನಾವು ಕಾಯುತ್ತಿಲ್ಲ. ರಾಜ್ಯ ಸರ್ಕಾರದಿಂದ ಸುಮಾರು ₹ 3 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದ್ದೇವೆ. ಜೆಡಿಎಸ್, ಕಾಂಗ್ರೆಸ್ ಅತಿಯಾಗಿ ಟೀಕೆ ಮಾಡುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿದ್ದರು. ಕೇಂದ್ರ ಸರ್ಕಾರದಿಂದ ಮುಂದಿನ ವಾರದಲ್ಲಿ ನೆರೆ ಪರಿಹಾರದ ಹಣ ಬಿಡುಗಡೆ ಆಗುವ ನಿರೀಕ್ಷೆ ಇದೆ ಎಂದು ಸ್ಪಷ್ಟಪಡಿಸಿದರು.

ಗುಲಗಂಜಿಯಷ್ಟು ಭಿನ್ನಾಭಿಪ್ರಾಯವಿಲ್ಲ:ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ನನ್ನ ನಡುವೆ ಗುಲಗಂಜಿಯಷ್ಟು ಭಿನಾಭಿಪ್ರಾಯ ಇಲ್ಲ ಎನ್ನುವ ಮೂಲಕ ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದ ಸುದ್ದಿಗೆ ತೆರೆ ಎಳೆದಿದ್ದಾರೆ.

ಇಬ್ಬರು ಚರ್ಚಿಸಿಯೇ ಎಲ್ಲ ತೀರ್ಮಾನ ಮಾಡುತ್ತಿದ್ದೇವೆ. ಮೇಯರ್ ಚುನಾವಣೆ ಸಂಬಂಧ ಚರ್ಚೆ ಮಾಡಿಯೇ ತೀರ್ಮಾನ ಕೈಗೊಂಡಿದೆ ಎಂದು ವಿವರಿಸಿದರು.

ABOUT THE AUTHOR

...view details