ಬೆಂಗಳೂರು: ಎರಡು ವಾರಗಳ ವಿದೇಶ ಪ್ರವಾಸ ಮುಗಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯಕ್ಕೆ ವಾಪಸ್ ಆಗಿದ್ದಾರೆ. ಇಂದು ಅವರ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಮಾತುಕತೆ ನಡೆಸಿದರು. ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಹೈಕಮಾಂಡ್ನಿಂದ ಬಂದಿರುವ ನಿರ್ದೇಶನಗಳ ಕುರಿತು ಸಮಾಲೋಚನೆ ನಡೆಸಿದರು.
ಜೂನ್ 21 ರಂದು ಯೂರೋಪ್ ಪ್ರವಾಸಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 15 ದಿನಗಳ ಪ್ರವಾಸ ಮುಗಿಸಿ ವಾಪಸ್ ಆಗಿದ್ದಾರೆ. ಅವರ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಮುಖ್ಯಮಂತ್ರಿ ಅವರು ಬಿ ಎಸ್ವೈ ಅವರನ್ನು ಭೇಟಿ ಮಾಡಿದರು. ಕಳೆದ ವಾರ ಹೈದರಾಬಾದ್ನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿರ್ಣಯಗಳನ್ನು ಬಿಎಸ್ವೈ ಗಮನಕ್ಕೆ ತಂದರು.