ಬೆಂಗಳೂರು: 70ನೇ ಸಂವಿಧಾನ ದಿನಾಚರಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.
ಸಂವಿಧಾನ ದಿನಾಚರಣೆ: ಶುಭ ಕೋರಿದ ಬಿಎಸ್ವೈ, ಡಿವಿಎಸ್! - 70th Constitution Day
70ನೇ ಸಂವಿಧಾನ ದಿನಾಚರಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.

ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತಕ್ಕೆ ಡಾ. ಬಿ.ಆರ್.ಅಂಬೇಡ್ಕರ್ ಸಂವಿಧಾನ ಎನ್ನುವ ಅದ್ಭುತ ಉಡುಗೊರೆ ನೀಡಿದ್ದಾರೆ. ಸಂವಿಧಾನ ದಿನವಾದ ಇಂದು ಸಂವಿಧಾನದ ಆಶೋತ್ತರಗಳನ್ನು ಎತ್ತಿಹಿಡಿಯುವ ಸಂಕಲ್ಪ ಮಾಡೋಣ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಕರೆ ನೀಡಿದ್ದಾರೆ.
ಇಂದು ಸಂವಿಧಾನ-ದಿನ:ನಮ್ಮದು ಜಗತ್ತಿನ ಅತಿದೊಡ್ಡ ಪ್ರಜಾತಂತ್ರ ವ್ಯವಸ್ಥೆ. ಇದಕ್ಕೆ ನಮ್ಮ ಸಂವಿಧಾನವೇ ಆಧಾರ. ಈ ಪವಿತ್ರ ಕೃತಿಯನ್ನು ಸಾಕಾರಗೊಳಿಸಿದ ನಮ್ಮೆಲ್ಲ ಹಿರಿಯರನ್ನು ಈ ಸಂದರ್ಭದಲ್ಲಿ ಪ್ರೀತಿ-ಗೌರವದಿಂದ ನೆನೆಯೋಣ. ಎಲ್ಲರಿಗೂ ಸಂವಿಧಾನ ದಿನಾಚರಣೆಯ ಶುಭಾಶಯಗಳು. ಜೈ ಭಾರತ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.