ಬೆಂಗಳೂರು: ನಾಳೆ ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ದಾವಣಗೆರೆ ಜಿಲ್ಲೆಗೆ ತೆರಳಲಿದ್ದಾರೆ. ಹರಿಹರ ತಾಲೂಕಿನ ಬೆಳ್ಳೂಡಿಯಲ್ಲಿ ಕನಕ ಗುರುಪೀಠದ 5ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಆದರೆ ಈ ಕಾರ್ಯಕ್ರಮದ ವೇಳೆ ಸಿಎಂ ಯಡುಯೂರಪ್ಪ ಹಾಗೂ ಸಚಿವ ಕೆ ಎಸ್ ಈಶ್ವರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ನಾಳೆ ಈ ಬೆಳ್ಳೂಡಿಯ ಕಾರ್ಯಕ್ರಮದಲ್ಲಿ ಸಚಿವ ಈಶ್ವರಪ್ಪ ಮತ್ತು ಸಿಎಂ ಬಿಎಸ್‌ವೈ ಮುಖಾಮುಖಿ ಆಗಲಿದ್ದಾರಾ ಎಂಬುದರ ಬಗ್ಗೆ ಕುತೂಹಲ ಹೆಚ್ಚಿದೆ.