ಬೆಂಗಳೂರು: 'ಮೈಸೂರು ಹುಲಿ' ಎಂದೇ ಖ್ಯಾತಿ ಪಡೆದಿದ್ದ ಟಿಪ್ಪು ಸುಲ್ತಾನ್ ಸಾಧನೆಯ ಹಿನ್ನೆಲೆಯಲ್ಲಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ'ಟಿಪ್ಪು ಜಯಂತಿ' ಆಚರಣೆಯನ್ನು ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ರದ್ದುಪಡಿಸಿದೆ.
ಕಾಂಗ್ರೆಸ್ ಜಾರಿಗೆ ತಂದಿದ್ದ 'ಟಿಪ್ಪು ಜಯಂತಿ' ರದ್ದು; ಬಿಎಸ್‌ವೈ ಸರ್ಕಾರ ಆದೇಶ - ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವಿದ್ದಾಗ ಜಾರಿಗೆ ತರಲಾಗಿದ್ದ ಟಿಪ್ಪು ಜಯಂತಿಯನ್ನು ರದ್ದುಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ
ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆ ವೇಳೆ ಸಾವುನೋವು ಸಂಭವಿಸಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿತ್ತು. ಹೀಗಾಗಿ ಕೂಡಲೇ 'ಟಿಪ್ಪು ಜಯಂತಿ' ಆಚರಣೆ ಆದೇಶವನ್ನು ರದ್ದುಪಡಿಸುವಂತೆ ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಸರ್ಕಾರವನ್ನು ಒತ್ತಾಯಿಸಿದ್ದರು.
ಕಳೆದ 29ನೇ ತಾರೀಖಿನಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ, ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವುದು ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದೆ.