ಬೆಂಗಳೂರು:ದೆಹಲಿಗೆ ತೆರಳಿರುವ ರಾಜ್ಯ ಬಿಜೆಪಿ ನಿಯೋಗ ಹೈಕಮಾಂಡ್ ಜೊತೆ ಚರ್ಚೆ ಮಾಡ್ತಿದೆ. ಶೀಘ್ರದಲ್ಲೇ ಬಿಎಸ್ವೈ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ರು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿ ಬಹುಮತ ಸಾಬೀತುಪಡಿಸಿದ ನಂತರ ಅಧಿಕಾರಕ್ಕೇರಲಿದೆ. ನಮ್ಮ ನಾಯಕರಾದ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ದೆಹಲಿಗೆ ನಿಯೋಗ ತೆರಳಿದ್ದು, ಪಕ್ಷದ ಮುಂದಿನ ನಡೆಗಾಗಿ ಚರ್ಚೆ ನಡೆಸಲಾಗುತ್ತಿದೆ ಎಂದರು.
ಶೀಘ್ರದಲ್ಲೇ ಬಿಎಸ್ವೈ ನೇತೃತ್ವದ ಸರ್ಕಾರ ರಚನೆಯಾಗಲಿದೆ- ಶ್ರೀರಾಮುಲು ಖಾತೆ ಹಂಚಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಚರ್ಚೆ ನಂತರ ಯಾರಿಗೆ ಯಾವ ಖಾತೆ ಕೊಡಬೇಕು ಎನ್ನುವುದು ತೀರ್ಮಾನ ಆಗುತ್ತೆ ಎಂದರು. ಇನ್ನು ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡುವವರೆಗೆ ಅತೃಪ್ತರು ಬೆಂಗಳೂರಿಗೆ ಬರಲ್ಲ ಅಂತ ಮಾತು ಕೊಟ್ಟಿದ್ದಾರೆ ಎಂದು ಹೇಳಿದ್ರು.
ತಮಗೆ ಡಿಸಿಎಂ ಸ್ಥಾನಮಾನ ನೀಡುವ ವಿಚಾರದ ಬಗ್ಗೆ ಮಾತನಾಡಿದ ಅವರು, ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ಪಕ್ಷ ಯಾವ ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ದನಾಗಿರುತ್ತೇನೆ ಎಂದರು.