ಬೆಂಗಳೂರು: ಕಾವೇರಿಯನ್ನ ಸ್ವಚ್ಛಗೊಳಿಸಬೇಕು ಹಾಗೂ ಹೆಚ್ಚು ಗಿಡಗಳನ್ನ ಬೆಳೆಸಿ ಅರಣ್ಯವನ್ನು ರಕ್ಷಿಸಬೇಕು. ಇಲ್ಲದಿದ್ದರೆ ಮುಂದೆ ನೀರಿಗಾಗಿ ಹಾಹಾಕಾರ ಉಂಟಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಕಾವೇರಿ ಉಳಿಸಿ ಅಭಿಯಾನಕ್ಕೆ ಸದ್ಗುರು ಜೊತೆ ಕೈಜೋಡಿಸಲು ಮುಂದಾದ ಬಿಎಸ್ವೈ - suttur sri
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಹಾಗೂ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಜಯನಗರದ ಜೆ. ಎಸ್. ಎಸ್ ಶಿಕ್ಷಣ ಸಂಸ್ಥೆಯ ಕಚೇರಿಯಲ್ಲಿ ಭೇಟಿ ಮಾಡಿ, ಆಶೀರ್ವಾದ ಪಡೆದ್ರು.
ಇಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಹಾಗೂ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಜಯನಗರದ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಕಚೇರಿಯಲ್ಲಿ ಸಂಪುಟ ಸದಸ್ಯರ ಜೊತೆ ಭೇಟಿ ಮಾಡಿ ಆಶೀರ್ವಾದ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಸದ್ಗುರು ಅವರ ಕಾವೇರಿ ಉಳಿಸಿ ಅಭಿಯಾನಕ್ಕೆ ನಾನು ಕೂಡ ಕೈ ಜೋಡಿಸುತ್ತೇನೆ. ಕಾವೇರಿಯನ್ನ ಸ್ವಚ್ಛಗೊಳಿಸೋಣ ಎಂದು ಕರೆ ನೀಡಿದ್ದಾರೆ.
ಸೆ. 8 ಕ್ಕೆ ಗುರೂಜೀ ಮೈಸೂರಿನಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ನಾನು ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ. ಅಲ್ಲದೆ ಪ್ರಧಾನಮಂತ್ರಿ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಅಲ್ಲದೆ ಕುಡಿಯೋ ನೀರು ಹಾಗೂ ನದಿಗಳ ಸ್ವಚ್ಛತೆಗೆ ಆದ್ಯತೆ ಕೊಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ಸಿಎಂ ಹೇಳಿದ್ದಾರೆ.