ಬೆಂಗಳೂರು:ರಾಜ್ಯದಲ್ಲಿ ಈಗಾಗಲೇ ಲೋಕಸಮರದ ಚುನಾವಣೆ ಮುಕ್ತಾಯವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚುನಾವಣಾ ಪ್ರಚಾರಕ್ಕಾಗಿ ದೆಹಲಿ ಅಖಾಡಕ್ಕಿಳಿಯಲಿದ್ದಾರೆ.
ಮೇ 12 ಕ್ಕೆ ದೆಹಲಿಯಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಈ ಸಂಬಂಧ ದೆಹಲಿಯಲ್ಲಿನ ಕನ್ನಡಿಗ ಮತದಾರರನ್ನು ಸೆಳೆಯಲು ಬಿಎಸ್ವೈ ಕಣಕ್ಕಿಳಿಯಲಿದ್ದಾರೆ. ಈಗಾಗಲೇ ಹೈ ಕಮಾಂಡ್ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕ ದೆಹಲಿಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ದೆಹಲಿಗೆ ತೆರಳಿದ್ದು, ಕನ್ನಡಿಗರ ಸಣ್ಣಪುಟ್ಟ ಸಭೆಗಳನ್ನು ನಡೆಸಿ ಮತಬೇಟೆ ಕೈಗೊಂಡಿದ್ದಾರೆ. ಅದರ ಜತೆಗೆ ಸಿ.ಟಿ.ರವಿ, ಆರ್.ಅಶೋಕ್ ಕೂಡ ದೆಹಲಿಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ.
ದೆಹಲಿಯಲ್ಲಿ ರಾಜ್ಯ ಬಿಜೆಪಿ ನಾಯಕರು ಯಡಿಯೂರಪ್ಪ ಅವರು ಕುಂದಗೋಳ ಹಾಗೂ ಚಿಂಚೋಳಿ ಉಪಚುನಾವಣೆಯಲ್ಲಿ ಒಂದ ಸುತ್ತಿನ ಪ್ರಚಾರ ಕಾರ್ಯ ನಡೆಸಿದ ಬಳಿಕ ದೆಹಲಿಗೆ ತೆರಳಿ ಮತಯಾಚನೆ ಕೈಗೊಳ್ಳಲಿದ್ದಾರೆ. ದೆಹಲಿಯಲ್ಲಿ ಕನ್ನಡಿಗರಿರುವ ಏರಿಯಾಗಳಲ್ಲಿ ರೋಡ್ ಶೋ, ಪ್ರಚಾರ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದ್ದು, ಈ ಪ್ರಚಾರ ಸಭೆಗಳಲ್ಲಿ ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಸುಮಾರು ಎರಡು ದಿನಗಳ ಕಾಲ ಯಡಿಯೂರಪ್ಪ ದೆಹಲಿಯಲ್ಲಿ ಇದ್ದು, ಬಿಜೆಪಿ ಪರ ಪ್ರಚಾರ ನಡೆಸುವ ಸಾಧ್ಯತೆ ಇದೆ.