ಬೆಂಗಳೂರು: ಸುಪ್ರೀಂಕೋರ್ಟ್ ಆದೇಶ ಅತೃಪ್ತರಿಗೆ ಬಲ ತಂದಿದೆ. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಸರ್ವೋಚ್ಚ ನ್ಯಾಯಾಲಯ ತೀರ್ಪು ಕೊಟ್ಟಿದೆ. ಇದು ಪ್ರಜಾಪ್ರಭುತ್ವದ ಗೆಲುವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದ್ದಾರೆ.
ಇದು ಮಧ್ಯಂತರ ಆದೇಶವಷ್ಟೇ, ಸ್ಪೀಕರ್ ಅಧಿಕಾರ ಸುಪ್ರೀಂ ನಿರ್ಧರಿಸಲಿದೆ: ಬಿಎಸ್ವೈ - ಮಧ್ಯಂತರ ಆದೇಶ
ಮಧ್ಯಂತರ ಆದೇಶ ಕುರಿತು ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ರಮಡಾ ರೆಸಾರ್ಟ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅತೃಪ್ತ ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಇದರಿಂದಾಗಿ ಅತೃಪ್ತ ಶಾಸಕರಿಗೆ ಬಲ ಬಂದಂತಾಗಿದೆ ಎಂದರು.
ಇದು ಕೇವಲ ಮಧ್ಯಂತರ ತೀರ್ಪಷ್ಟೆ. ಯಾವುದೇ ಕಾರಣಕ್ಕೂ 15ಜನ ಶಾಸಕರಿಗೆ ವಿಪ್ ಜಾರಿ ಅನ್ವಯವಾಗುವುದಿಲ್ಲ. ಸುಪ್ರೀಂ ಕೋರ್ಟ್ ಗಂಭೀರ ಚಿಂತನೆ ನಡೆಸಿ ಸದನಕ್ಕೆ ಬರಲು ಒತ್ತಾಯ ಮಾಡುವ ಹಾಗಿಲ್ಲ ಎಂದು ಮಧ್ಯಂತರ ತೀರ್ಪು ನೀಡಿದೆ. ಸ್ಪೀಕರ್ ಇದರನ್ವಯ ತೀರ್ಮಾನ ತೆಗೆದುಕೊಂಡು ತಮ್ಮ ನಿರ್ಧಾರ ತಿಳಿಸಬೇಕೆಂದು ಹೇಳಿದೆ. ಇದರನ್ವಯ ಸ್ಪೀಕರ್ ನಿರ್ಣಯ ಕೈಗೊಳ್ಳಬೇಕೆಂದು ಒತ್ತಾಯಿಸಿದರು.