ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ವೈ ರಾಜೀನಾಮೆ ನೀಡಿ ಭಾವುಕ ಕ್ಷಣವನ್ನು ಕಂಡು ಆತ್ಮಹತ್ಯೆಗೆ ಶರಣಾಗಿದ್ದ ಅವರ ಅಭಿಮಾನಿ ರವಿ ನಿವಾಸಕ್ಕೆ ನಾಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿದ್ದಾರೆ.
ಶುಕ್ರವಾರ ಬೆಳಗ್ಗೆ 10 ಗಂಟೆಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಗುಂಡ್ಲುಪೇಟೆಗೆ ಬಿಎಸ್ವೈ ತೆರಳಲಿದ್ದು, ಮಧ್ಯಾಹ್ನ 12 ಗಂಟೆಗೆ ಬೊಮ್ಮಲಾಪುರದಲ್ಲಿರುವ ಅಭಿಮಾನಿ ಹಾಗು ಬಿಜೆಪಿ ಕಾರ್ಯಕರ್ತ ರವಿ ಮನೆಗೆ ಭೇಟಿ ನೀಡಲಿದ್ದಾರೆ.