ಬೆಂಗಳೂರು:ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಅವರೇ ನಮ್ಮ ನಾಯಕ. ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ. ನಾಯಕತ್ವ ಬದಲಾವಣೆ ಹೇಳಿಕೆ ನೀಡಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಪಕ್ಷ ನಿರ್ಧರಿಸಲಿದೆ ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ ಹೇಳಿದ್ದಾರೆ.
ನಾಯಕತ್ವ ಬದಲಾವಣೆ ಇಲ್ಲ, ಬಿಎಸ್ವೈ ಸಿಎಂ ಆಗಿ ಮುಂದುವರೆಯಲಿದ್ದಾರೆ: ಡಿಸಿಎಂ ಅಶ್ವತ್ಥ ನಾರಾಯಣ - DCM Ashwath narayana
ಬಸನಗೌಡ ಪಾಟೀಲ್ ಯತ್ನಾಳ್ ಅವರು ಏಕೆ ಆ ರೀತಿ ಹೇಳಿಕೆ ನೀಡಿದ್ದಾರೆಂದು ಗೊತ್ತಿಲ್ಲ. ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಡಿಸಿಎಂ ಅಶ್ವತ್ಥನಾರಾಯಣ
ನಗರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ, ಬಸನಗೌಡ ಪಾಟೀಲ್ ಯತ್ನಾಳ್ ಅವರು ಏಕೆ ಆ ರೀತಿ ಹೇಳಿಕೆ ನೀಡಿದ್ದಾರೆಂದು ಗೊತ್ತಿಲ್ಲ. ಇದನ್ನು ಅವರೇ ಹೇಳಬೇಕು. ಯತ್ನಾಳ್ ಇಂತಹ ಹೇಳಿಕೆ ಕೊಡುತ್ತಲೇ ಇರುತ್ತಾರೆ. ಇದಕ್ಕೆ ಉತ್ತರ ಕೊಡುತ್ತಿರಲು ಸಾಧ್ಯವಿಲ್ಲ.
ಆದರೆ ಯಡಿಯೂರಪ್ಪ ನಮ್ಮ ನಾಯಕ. ಅದರಲ್ಲಿ ಯಾವುದೇ ಅನುಮಾನ ಇಲ್ಲ. ಅವರು ಸಿಎಂ ಆಗಿಯೇ ಇರಲಿದ್ದಾರೆ ಎಂದರು. ಪಕ್ಷದ ಅಧ್ಯಕ್ಷರು, ವರಿಷ್ಠರು ಯತ್ನಾಳ್ ವಿರುದ್ಧ ಕ್ರಮದ ಬಗ್ಗೆ ನೋಡಿಕೊಳ್ಳಲಿದ್ದಾರೆ. ಈ ವಿಚಾರದಲ್ಲಿ ನಾಯಕರು ಗಮನ ಹರಿಸಲಿದ್ದು, ತೀರ್ಮಾನಿಸಲಿದ್ದಾರೆ ಎಂದರು.