ಬೆಂಗಳೂರು:ಬಿಜೆಪಿ ಅಭ್ಯರ್ಥಿ ಎಸ್.ಟಿ ಸೋಮಶೇಖರ್ ಗೆಲ್ಲಿಸಲು ಪಣ ತೊಟ್ಟಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಾಳೆ ಮತ್ತೊಮ್ಮೆ ಯಶವಂತಪುರ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ.
ಹಾವೇರಿ ಪ್ರವಾಸ ಮುಗಿಸಿ ನಗರಕ್ಕೆ ಹಿಂದಿರುಗುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಾಳೆ ಬೆಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದು, ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಹೆಮ್ಮಿಗೆಪುರ, ಕೆಂಗೇರಿ, ಉಲ್ಲಾಳುವಿನಲ್ಲಿ ಪ್ರತ್ಯೇಕವಾಗಿ ಪ್ರಚಾರ ನಡೆಸಲಿದ್ದಾರೆ.