ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 2022ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಈ ಬಾರಿ ಬಜೆಟ್ನಲ್ಲಿ ನೀಡಿರುವ ಕೊಡುಗೆಗಳು ಈ ಕೆಳಕಂಡಂತಿವೆ.
* ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಪ್ರವಾಸಿ ವೃತ್ತ ಹಾಗೂ ಮೈಸೂರು-ಶ್ರೀರಂಗಪಟ್ಟಣ-ಹಾಸನ-ಬೇಲೂರು ಹಳೇಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ.
* ಬೇಲೂರು, ಹಳೇಬೀಡು, ಸೋಮನಾಥಪುರ ಒಳಗೊಂಡಂತೆ ಹೊಯ್ಸಳರ ಸ್ಮಾರಕಗಳನ್ನು ಪ್ರಸಕ್ತ ಸಾಲಿನಲ್ಲಿ ಯುನೆಸ್ಕೊ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ.
* ಜೋಗ ಜಲಪಾತದಲ್ಲಿ 116 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಹೋಟೆಲ್ ಹಾಗೂ ರೋಪ್‌ವೇ ಅಭಿವೃದ್ಧಿ.
* ನಂದಿ ಬೆಟ್ಟದಲ್ಲಿ 93 ಕೋಟಿ ರೂ.ವೆಚ್ಚದಲ್ಲಿ ರೋಪ್‌ವೇ ನಿರ್ಮಾಣಕ್ಕೆ ಅನುಮೋದನೆ. ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ರೋಪ್‌ವೇ ನಿರ್ಮಾಣಕ್ಕೆ ಕ್ರಮ.
* ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ. ವೆಚ್ಚದಲ್ಲಿ ಯೋಜನೆ.
* ಪರ್ವತ ಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಹಾಗೂ ಮುಳ್ಳಯ್ಯನಗಿರಿ ದತ್ತಪೀಠಗಳಲ್ಲಿ ರೋಪ್‌ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ.
* ಕರಾವಳಿ ಭಾಗದ ಜಲ ಮೂಲಗಳಲ್ಲಿನ ಪ್ಲಾಸ್ಟಿಕ್ ಮಾಲಿನ್ಯ ನಿವಾರಿಸಲು 840 ಕೋಟಿ ರೂ. ವೆಚ್ಚದ ವಿನೂತನ ಎಸ್ಪಿ ನಿರ್ವಹಣೆ ಯೋಜನೆ ಜಾರಿ. ಇದು ದೇಶದಲ್ಲೇ ಮೊದಲು.
* ಖಾಸಗಿ ಭೂಮಿಗಳಲ್ಲಿ ಶ್ರೀಗಂಧ ಮರ ಬೆಳೆಸಲು ಉತ್ತೇಜನ ನೀಡಲು ಶ್ರೀಗಂಧ ನೀತಿ ಅನುಷ್ಠಾನ.
* ಕಡಲತೀರದ ಪ್ರವಾಸೋದ್ಯಮ ಉತ್ತೇಜನಕ್ಕೆ ಮಾನದಂಡಗಳನ್ನು ಸಡಿಲಗೊಳಿಸಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಅನುಮೋದನೆ ಪಡೆಯಲು ಕ್ರಮ. ತದಡಿ ಬಂದರಿನಲ್ಲಿ ಸಮಗ್ರ ಪರಿಸರ ಪ್ರವಾಸೋದ್ಯಮ ಕೇಂದ್ರ ಅಭಿವೃದ್ಧಿ.